ಕೂಡಿಗೆ ಸೈನಿಕ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು
ಕೊಡಗು

ಕೂಡಿಗೆ ಸೈನಿಕ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

June 24, 2018

ಕುಶಾಲನಗರ: ಕೂಡಿಗೆ ಸೈನಿಕ ಶಾಲೆಯಲ್ಲಿ ವಿದ್ಯಾರ್ಥಿ ಯೋರ್ವ ಅನುಮಾನಸ್ಪದವಾಗಿ ಸಾವಿಗೀಡಾಗಿದ್ದು, ಈತನನ್ನು ಕೊಲೆ ಮಾಡಲಾಗಿದೆ ಎಂದು ಸಂಬಂಧಿಕರು ಆರೋಪಿಸುತ್ತಿದ್ದಾರೆ.

ಸೋಮವಾರಪೇಟೆ ತಾಲೂಕು ಮಾದಾಪುರ ಗ್ರಾಮದವನಾಗಿದ್ದು, ಕೂಡಿಗೆ ಸೈನಿಕ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಚಿಂಗಪ್ಪ (14) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ವಿದ್ಯಾರ್ಥಿ. ಈತ ಇಂದು ಸಂಜೆ ಶಾಲೆಯ ಶೌಚಾಲಯದಲ್ಲಿ ಪ್ರಜ್ಞಾಹೀನನಾಗಿ ಬಿದ್ದಿದ್ದ ಎನ್ನಲಾಗಿದ್ದು, ಅದನ್ನು ಗಮನಿಸಿದ ಶಾಲೆಯವರು ಆತನನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ, ವಿದ್ಯಾರ್ಥಿ ಅದಾಗಲೇ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.

ವಿದ್ಯಾರ್ಥಿ ಸಾವನ್ನಪ್ಪಿರುವುದು ತಿಳಿಯುತ್ತಿದ್ದಂತೆಯೇ ಕುಶಾಲನಗರ ಆಸ್ಪತ್ರೆ ಮುಂಭಾಗ ಆತನ ಸಂಬಂಧಿಕರು ಹಾಗೂ ಗ್ರಾಮಸ್ಥರು ಜಮಾಯಿಸಿ, ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ, ಪ್ರತಿಭಟನೆ ನಡೆಸುತ್ತಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಸಬ್‍ಇನ್ಸ್‍ಪೆಕ್ಟರ್ ನವೀನ್ ಗೌಡ ಸ್ಥಳಕ್ಕೆ ಭೇಟಿ ನೀಡಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ.

Translate »