ಸ್ವೀಪ್: ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮ
ಕೊಡಗು

ಸ್ವೀಪ್: ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮ

April 24, 2018

ಮಡಿಕೇರಿ: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ವತಿಯಿಂದ ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಿಲ್ಲೆಯಾದ್ಯಾಂತ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿವೆ.

ಅರ್ಹ ಮತದಾರರು ತಪ್ಪದೇ ಮತ ಚಲಾಯಿಸಬೇಕು. ಮತದಾನದಿಂದ ಯಾವುದೇ ಕಾರಣಕ್ಕೂ ವಂಚಿತರಾಗಬಾರದು, ‘ಯಾವುದೇ ರೀತಿಯ ಆಮೀಷಕ್ಕೆ ಮರುಳಾಗದಿರಿ-ವಿವೇಚನೆಯಿಂದ ಮತ ಚಲಾಯಿಸಿ, ಮತದಾನ ಮಾಡಿದವರೇ ಮಹಾಶೂರರು’ ಎಂಬ ಸಂದೇಶಗಳನ್ನು ಸಾರಲಾಗುತ್ತಿದೆ.

ಮತಗಟ್ಟೆಗೆ ತೆರಳಿ ತಪ್ಪದೆ ಮತ ಚಲಾಯಿಸಿ, ಶೇಕಡವಾರು ಮತದಾನವಾಗಲು ಅರ್ಹರು ಮತ ಚಲಾಯಿಸುವಂತಾಗಬೇಕು. ಮತದಾನ ನಮ್ಮ ಹಕ್ಕು, ಪ್ರಜಾಪ್ರಭುತ್ವ ಬಲಪಡಿಸಲು ತಪ್ಪದೆ ಮತ ಚಲಾಯಿಸಿ ಎಂಬ ಪ್ರಚಾರ ಮಾಡಲಾಗುತ್ತಿದೆ. ಯುವ ಮತದಾರರಲ್ಲಿ ಜಾಗೃತಿ, ಜಾಥಾ, ಮನೆ ಮನೆಗೆ ಭೇಟಿ ನೀಡಿ, ವಿಚಾರ ಸಂಕಿರಣ, ಸಹಿ ಸಂಗ್ರಹ, ವಿಕಲಚೇತನರಿಂದ ತ್ರಿಚಕ್ರವಾಹನದ ಮೂಲಕ ಬೈಕ್ ರ್ಯಾಲಿ, ರೇಡಿಯೋ ಕಾರ್ಯಕ್ರಮ, ಬಸ್ ನಿಲ್ದಾಣದಲ್ಲಿ ಮಾಹಿತಿ ಹೀಗೆ ನಾನಾ ರೀತಿಯ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿವೆ.

ಜೊತೆಗೆ ಈ ಬಾರಿ ಪ್ರಥಮ ಬಾರಿಗೆ ಚುನಾವಣಾ ಆಯೋಗ ಪರಿಚಯಿಸಿರುವ ವಿವಿಪ್ಯಾಟ್ ಬಗ್ಗೆ ಅರಿವು ಕಾರ್ಯಕ್ರಮಗಳು ಜಿಲ್ಲೆಯ ನಾನಾ ಕಡೆಗಳಲ್ಲಿ ನಡೆಯುತ್ತಿವೆ. ವಿವಿಪ್ಯಾಟ್ ಬಗ್ಗೆ ಸೆಕ್ಟರ್ ಅಧಿಕಾರಿಗಳು ಸೇರಿದಂತೆ ತರಬೇತಿದಾರರು ಮಾಹಿತಿ ನೀಡುತ್ತಿದ್ದಾರೆ. ಮತದಾನಲ್ಲಿ ಅರ್ಹರು ತಪ್ಪದೇ ಮತ ಚಲಾಯಿಸಬೇಕು. ಜಿಲ್ಲೆಯಲ್ಲಿ ಶೇಕಡವಾರು ಮತದಾನದ ಪ್ರಮಾಣ ಹೆಚ್ಚಳವಾಗಬೇಕು ಎಂಬ ಉದ್ದೇಶದಿಂದ ಸ್ವೀಪ್ ವತಿಯಿಂದ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ತಿಳಿಸಿದ್ದಾರೆ.

Translate »