ಕೋವಿಡ್ ಸೋಂಕಿತರ ಆರೋಗ್ಯ ವಿಚಾರಿಸಿದ ಸ್ವಾಮೀಜಿ
ಮಂಡ್ಯ

ಕೋವಿಡ್ ಸೋಂಕಿತರ ಆರೋಗ್ಯ ವಿಚಾರಿಸಿದ ಸ್ವಾಮೀಜಿ

April 25, 2021

ನಾಗಮಂಗಲ, ಏ.24-ಆದಿಚುಂಚನಗಿರಿ ಆಸ್ಪತ್ರೆಯಲ್ಲಿರುವ ಕೊರೊನಾ ಚಿಕಿತ್ಸಾ ಕೇಂದ್ರಕ್ಕೆ ಇಂದು ಭೇಟಿ ನೀಡಿದ ನಿರ್ಮಲಾನಂದನಾಥ ಶ್ರೀಗಳು ಪಿಪಿಇ ಕಿಟ್ ಧರಿಸಿ, ಸೋಂಕಿತರ ಆರೋಗ್ಯ ವಿಚಾರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಆದಿಚುಂಚನಗಿರಿ ಮಠದ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನೀಡುವ ಕಡೆ ಗಮನ ಹರಿಸಿವೆ. ಆಸ್ಪತ್ರೆಯಲ್ಲಿ 250ಕ್ಕೂ ಹೆಚ್ಚು ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ವೆಂಟಿಲೇಟರ್ ಹಾಗೂ ಆಕ್ಸಿಜನ್ ಕೂಡ ಅಗತ್ಯ ಪ್ರಮಾಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಯಾರೂ ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಅಲ್ಲದೆ ತಾವೂ ಕೋವಿಡ್ ಲಸಿಕೆಯ ಎರಡು ಡೋಸ್ ಗಳನ್ನು ಪಡೆದಿದ್ದು, ಆರೋಗ್ಯವಾಗಿದ್ದೇನೆ. ಲಸಿಕೆ ಪಡೆಯು ವುದರಿಂದ ಸಮಸ್ಯೆ ಇಲ್ಲ. ಯಾರೂ ಸಹ ಲಸಿಕೆಯ ವಿಚಾರವಾಗಿ ಭಯಪಡುವ ಅಗತ್ಯವಿಲ್ಲ. ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರುವ ತನಕ ಮನೆಯಲ್ಲೇ ಇದ್ದು ದೇವರಲ್ಲಿ ಪ್ರಾರ್ಥಿಸುವಂತೆ ಮಠದ ಭಕ್ತರಿಗೆ ಸಲಹೆ ನೀಡಿದರು.

Translate »