ಬಿಜೆಪಿ ಅಧ್ಯಕ್ಷ ಅಮಿತ್ ಶಾಗೆ  ಹಂದಿ ಜ್ವರ: ಏಮ್ಸ್ ಆಸ್ಪತ್ರೆಗೆ ದಾಖಲು
ಮೈಸೂರು

ಬಿಜೆಪಿ ಅಧ್ಯಕ್ಷ ಅಮಿತ್ ಶಾಗೆ ಹಂದಿ ಜ್ವರ: ಏಮ್ಸ್ ಆಸ್ಪತ್ರೆಗೆ ದಾಖಲು

January 17, 2019

ನವದೆಹಲಿ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಹಂದಿ ಜ್ವರ ಸೋಂಕು ತಗುಲಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಅಮಿತ್ ಶಾ ಅವರೇ ತಮ್ಮ ಟ್ವಿಟರ್ ಖಾತೆ ಯಲ್ಲಿ ಬರೆದಿದ್ದು, ನನಗೆ ಹಂದಿ ಜ್ವರ ಸೋಂಕು ತಗುಲಿದ್ದು ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.

ದೇವರ ಕೃಪೆ ಮತ್ತು ನಿಮ್ಮೆ ಲ್ಲರ ಪ್ರೀತಿ ಮತ್ತು ಆಶೀರ್ವಾದದಿಂದ ಶೀಘ್ರ ಗುಣಮುಖನಾಗಿ ಬರುತ್ತೇನೆ ಎಂದು ಶಾ ಟ್ವೀಟ್ ಮಾಡಿದ್ದಾರೆ. ಇನ್ನು ಇದೇ ವಿಚಾರವಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರೂ ಕೂಡ ಟ್ವೀಟ್ ಮಾಡಿದ್ದು, ಅಮಿತ್ ಶಾ ಅವರೊಂದಿಗೆ ನಾನು ಮಾತುಕತೆ ನಡೆಸಿದ್ದು, ಅವರ ಆರೋಗ್ಯ ಸ್ಥಿರ ವಾಗಿದೆ. ಅವರು ಶೀಘ್ರ ಗುಣ ಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Translate »