ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಟಿ.ಎಂ. ವಿಜಯಭಾಸ್ಕರ್ ಅಧಿಕಾರ ಸ್ವೀಕಾರ
ಮೈಸೂರು

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಟಿ.ಎಂ. ವಿಜಯಭಾಸ್ಕರ್ ಅಧಿಕಾರ ಸ್ವೀಕಾರ

July 1, 2018

ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಟಿ.ಎಂ. ವಿಜಯಭಾಸ್ಕರ್ ಇಂದಿಲ್ಲಿ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ವಿಜಯಭಾಸ್ಕರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಇದಕ್ಕೂ ಮುನ್ನ ಸರ್ಕಾರ ಸೇವಾ ಹಿರಿತನದ ಆಧಾರದ ಮೇಲೆ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಟಿ.ಎಂ. ವಿಜಯಭಾಸ್ಕರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು.

ನೂತನ ಮುಖ್ಯ ಕಾರ್ಯದರ್ಶಿ ಆಯ್ಕೆ ಕುರಿತು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದು ಮುಖ್ಯಮಂತ್ರಿಯವರ ನಿರ್ಧಾರಕ್ಕೆ ಬಿಡಲಾಗಿತ್ತು.

ಆಂಧ್ರ ಪ್ರದೇಶ ಮೂಲದ ಐಎಎಸ್ ಅಧಿಕಾರಿ ಟಿ.ಎಂ. ವಿಜಯಭಾಸ್ಕರ್ ಸೇವಾವಧಿ ಡಿಸೆಂಬರ್ 31, 2020 ರವರೆಗೆ ಇರಲಿದೆ. ಹಿಂದುಳಿದ ವರ್ಗಕ್ಕೆ ಸೇರಿದ ಕೆ. ರತ್ನಪ್ರಭಾ ಅವರು 37 ವರ್ಷಗಳ ನಿರಂತರ ಸೇವಾ ಅವಧಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದು, ಸರ್ಕಾರದ ಅತ್ಯುನ್ನತ ಹುದ್ದೆಯಾದ ಮುಖ್ಯ ಕಾರ್ಯದರ್ಶಿ ಸ್ಥಾನದವರೆಗೂ ಏರಿದರು.

ಕಳೆದ ಮಾರ್ಚ್‍ನಲ್ಲಿ ಸೇವಾ ಅವಧಿಯನ್ನು ಮೂರು ತಿಂಗಳಿಗೆ ವಿಸ್ತರಿಸಿ ಸರ್ಕಾರ ಆದೇಶಿಸಿತ್ತು.

ಸೇವಾವಧಿಯಲ್ಲಿ ಸಹಕರಿಸಿದ ಸಹೋದ್ಯೋಗಿ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿರುವ ಅವರು, ಜನರೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಸಲಹೆ ನೀಡಿದ್ದಾರೆ.

Translate »