ವಿವೇಕಾನಂದ ಸದ್ಭಾವನಾ ಪ್ರಶಸ್ತಿಗೆ ಟಿ.ಸತೀಶ್ ಜವರೇಗೌಡರ ಆಯ್ಕೆ
ಮೈಸೂರು

ವಿವೇಕಾನಂದ ಸದ್ಭಾವನಾ ಪ್ರಶಸ್ತಿಗೆ ಟಿ.ಸತೀಶ್ ಜವರೇಗೌಡರ ಆಯ್ಕೆ

January 11, 2021

ಮೈಸೂರು, ಜ.10(ಆರ್‍ಕೆಬಿ)-ಮೈಸೂರಿನ ಸ್ಪಂದನ ಸಾಂಸ್ಕøತಿಕ ಪರಿಷತ್ತಿನ ಸಂಸ್ಥಾ ಪಕ ಟಿ.ಸತೀಶ್ ಜವರೇಗೌಡ ಅವರು ನಾಗಮಂಗಲ ಹಾರ್ಟ್ ಟ್ರಸ್ಟ್ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜ.13ರಂದು ಬೆಳಗ್ಗೆ 10 ಗಂಟೆಗೆ ನಾಗಮಂಗಲ ಪಟ್ಟಣದ ಶ್ರೀ ಆದಿಚುಂಚನಗಿರಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ನಡೆಯಲಿರುವ ಸ್ವಾಮಿ ವಿವೇಕಾನಂದ ಹಾಗೂ ಡಾ.ಬಾಲ ಗಂಗಾಧರನಾಥ ಸ್ವಾಮೀಜಿ ಸಂಸ್ಮರಣಾ ಸಮಾರಂಭದಲ್ಲಿ ಮಾಜಿ ಸಚಿವೆ, ಸಾಹಿತಿ ಡಾ.ಬಿ.ಟಿ.ಲಲಿತಾ ನಾಯಕ್ ಅವರು ಸತೀಶ್ ಜವರೇಗೌಡರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ ಡಾ.ನಂದೀಶ್ ಹಂಚೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸ್ಪಂದನ ಸಾಂಸ್ಕøತಿಕ ಪರಿಷತ್ತಿನ ಕಾರ್ಯದರ್ಶಿ ಡಾ.ಬಿ.ಬಸವರಾಜು ತಿಳಿಸಿದ್ದಾರೆ.

Translate »