ಚಾಮರಾಜನಗರ: ಶಿಕ್ಷಣ ಕ್ಷೇತ್ರದಲ್ಲಿ ತೆರೆದ ಪುಸ್ತಕ ಪರೀಕ್ಷೆ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಿ ರುವುದು ಕ್ರಾಂತಿಕಾರಿ ಹೆಜ್ಜೆ ಎಂದು ಭಾಷಾ ತಜ್ಞ ಹಾಗೂ ಚಲನಚಿತ್ರ ನಿರ್ದೇಶಕ ಅಬ್ದುಲ್ ರೆಹಮಾನ್ ಪಾಷ ಬಣ್ಣಿಸಿದರು. ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಬಹುಜನ ವಿದ್ಯಾರ್ಥಿ ಸಂಘ (ಬಿವಿಎಸ್) ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಮುಕ್ತ ಸಂವಾದ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಅವರು ಸಣ್ಣ ಮಕ್ಕಳಲ್ಲಿ ಇರುವ ಪರೀಕ್ಷಾ ಒತ್ತಡವನ್ನು ನಿವಾರಿಸಲು…