ಮೈಸೂರು: ಬೆಂಗಳೂರಿನಲ್ಲಿ ಆದಿಜಾಂಬವ ಸಮುದಾಯದ ಶಾಸಕರು, ಸಾಹಿತಿಗಳು ಹಾಗೂ ಕಲಾವಿದರಿಗೆ ಜು.29ರಂದು ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ. ಆದರೆ ಮೈಸೂರು ಭಾಗದ ಸಮುದಾಯದ ಮುಖಂಡರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲೂ ಹಾಕಿಸದೇ ಕಡೆಗಣಿಸಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಪ್ರೊ.ಕೃಷ್ಣಪ್ಪ ಸ್ಥಾಪಿತ) ಮಂಡ್ಯ ಜಿಲ್ಲಾ ಸಮಿತಿ ಆರೋಪಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾ ಸಂಚಾಲಕ ನಂಜುಂಡ ಮೌರ್ಯ ಮಾತನಾಡಿ, ಬೆಂಗಳೂರಿನ ಭಾವರೂಪಕ ಪ್ರತಿಷ್ಠಾನ ಟ್ರಸ್ಟ್ ಹಾಗೂ ಆದಿಜಾಂಬವ ಜಾಗೃತ ವೇದಿಕೆ ಜಂಟಿ ಆಶ್ರಯದಲ್ಲಿ…