ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಹಾಮಳೆಯ ಆರ್ಭಟದಿಂದ ಉಂಟಾಗಿರುವ ಪ್ರಾಕೃತಿಕ ವಿಕೋಪಗಳಿಂದ ನಲುಗಿರುವ ಗ್ರಾಮಗಳಲ್ಲಿನ ಪರಿಹಾರ ಕಾರ್ಯಗಳಲ್ಲಿ ಸರ್ಕಾರದೊಂದಿಗೆ ಶ್ರೀ ಆದಿಚುಂಚನಗಿರಿ ಮಠ ಕೈಜೋಡಿಸಿ ಶ್ರಮಿಸಲಿದೆಯೆಂದು ಶ್ರೀ ಡಾ.ನಿರ್ಮಲಾನಂದ ಮಹಾ ಸ್ವಾಮೀಜಿ ತಿಳಿಸಿದ್ದಾರೆ. ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ಸಂಕಷ್ಟಕ್ಕೆ ಸಿಲುಕಿರುವ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ, ಮಡಿಕೇರಿಯ ಗೌಡ ಸಮಾಜದ ಸಭಾಂಗಣದಲ್ಲಿ ಶ್ರೀಮಠದಿಂದ ಆಯೋಜಿತ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ಆದಿಚುಂಚನಗಿರಿ ಮಠಾಧೀಶ ಶ್ರೀ ಡಾ.ನಿರ್ಮಲಾನಂದ ಮಹಾ ಸ್ವಾಮೀಜಿ, ಕೊಡಗಿನಲ್ಲಿ ಭಾರೀ ಮಳೆಯಿಂದ ಪ್ರಾಕೃ…