ಅಹ್ಮದಾಬಾದ್: ಗುಜರಾತ್‍ನಲ್ಲಿ ಮಂಗಳವಾರ ಮತದಾನದ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತದಾನ ಮಾಡುವ ಮುನ್ನ ತಮ್ಮ ತಾಯಿ ಹೀರಾಬೆನ್ ಮೋದಿಯವರ ಆಶೀರ್ವಾದ ಪಡೆದರು. ಅಹಮದಾ ಬಾದ್ ಸಮೀಪ ರೈಸನ್ ಗ್ರಾಮದಲ್ಲಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ತಮ್ಮ ಕಿರಿಯ ಪುತ್ರ ಪಂಕಜ್ ಮೋದಿ ಜೊತೆ ವಾಸಿಸುತ್ತಿದ್ದು, ಅಲ್ಲಿಗೆ ತೆರಳಿದ್ದ ಮೋದಿ ತಾಯಿಯ ಆಶೀರ್ವಾದ ಪಡೆದರು. ಗಾಂಧಿನಗರದ ರಾಜಭವನದಲ್ಲಿ ಕಳೆದ ರಾತ್ರಿ ತಂಗಿದ್ದ ನರೇಂದ್ರ ಮೋದಿ ಇಂದು ಬೆಳಿಗ್ಗೆ ಕೇವಲ ಒಂದು ಭದ್ರತಾ ವಾಹನ ದೊಂದಿಗೆ…