ಮೈಸೂರು: ದಸರಾ ಮಹೋತ್ಸವದ ಹಿನ್ನೆಲೆ ಯಲ್ಲಿ ಮೈಸೂರು-ಬೆಂಗಳೂರು ನಡುವೆ ಸಂಚರಿಸುತ್ತಿರುವ `ಆಕಾಶ ಅಂಬಾರಿ’ ವಿಮಾನ ಯಾನಕ್ಕೆ ಜನರ ಪ್ರತಿ ಕ್ರಿಯೆ ಮನಗಂಡು ಸೇವೆ ಮುಂದುವರಿಸುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ದಸರಾ ಆನೆಗಳಿಗೆ ಭಾನುವಾರ ಪೂಜೆ ಸಲ್ಲಿಸಿ ಬೀಳ್ಕೊಟ್ಟ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದಸರಾ ಹಿನ್ನೆಲೆಯಲ್ಲಿ ಮೈಸೂರು- ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಆಕಾಶ ಅಂಬಾರಿ ವಿಮಾನಯಾನಕ್ಕೆ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಯಾಣ ದರ ಒಬ್ಬರಿಗೆ 999 ರೂ ನಿಗದಿ ಮಾಡಲಾಗಿತ್ತು. ಇದರಿಂದ…