ಬೆಂಗಳೂರು: ನಗರದೆಲ್ಲೆಡೆ ಎರಡು ದಿನ 144 ಸೆಕ್ಷನ್ ಜಾರಿ ಮಾಡಲಾಗಿದೆ. ಇಂದು ಸಂಜೆ 6 ಗಂಟೆಯಿಂದ ಗುರುವಾರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ನಗರದ ಎಲ್ಲ ಬಾರ್, ಪಬ್ ಬಂದ್ ಆಗಿರುತ್ತವೆ ಎಂದು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ. ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ನಿತೀಶ್ ಅಪಾರ್ಟ್‍ಮೆಂಟ್ ನಲ್ಲಿರುವ ವಿಷಯ ತಿಳಿಯುತ್ತಿದ್ದಂತೆ ಇಬ್ಬರಿಗಾಗಿ ನಡುರಸ್ತೆಯಲ್ಲಿ ಇಂದು ಸಂಜೆ ಹೈಡ್ರಾಮಾ ನಡೆದಿದೆ….