ಪಶ್ಚಿಮ ಬಂಗಾಳ,ಫೆ.11-ದೇಶದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಮುಗಿದ ತಕ್ಷಣ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ(ಸಿಎಎ) ಜಾರಿಗೊಳಿಸುವ ಮೂಲಕ ನಿಮ್ಮೆ ಲ್ಲರಿಗೂ ಪೌರತ್ವ ನೀಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಠಾಕೂರ್ ನಗರದ ಮಾಟುವಾ ಕೋಟೆಯಲ್ಲಿ ಸಾರ್ವ ಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, “ಸಿಎಎಗೆ ಮುಸ್ಲಿಮರ ಪೌರತ್ವ ಕಸಿದು ಕೊಳ್ಳುವ ಯಾವುದೇ ನಿಬಂಧನೆ ಇಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಕಳೆದ 70 ವರ್ಷ ಗಳಿಂದ ಭಾರತದಲ್ಲಿ…
ಅಮಿತ್ ಶಾ ಅವಧಿ ಡಿ.31ಕ್ಕೆ ಅಂತ್ಯ: ಜೆ.ಪಿ.ನಡ್ಡಾ ಬಿಜೆಪಿ ಅಧ್ಯಕ್ಷ?
December 5, 2019ಹೊಸದಿಲ್ಲಿ: ಡಿಸೆಂಬರ್ 3ಕ್ಕೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಅವಧಿ ಅಂತ್ಯ ಹಿನ್ನೆಲೆ ಕೇಂದ್ರ ಬಿಜೆಪಿಗೆ ಜನವರಿ 2020ಕ್ಕೆ ನೂತನ ಸಾರಥಿ ನೇಮಕ ನಡೆಯಲಿದೆ. ಕೇಂದ್ರ ಬಿಜೆಪಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಜೆ.ಪಿ.ನಡ್ಡಾ ಅವರೇ ನೂತನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಇನ್ನು ಜೆ.ಪಿ. ನಡ್ಡಾರಿಂದ ತೆರವಾಗುವ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಭೂಪೇಂದ್ರಯಾದವ್ ಅವರನ್ನು ನೇಮಿಸುವ ಸಾಧ್ಯತೆ ಇದೆ. ಡಿ.20ರ ಬಳಿಕ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಬಗ್ಗೆ ನಿಖರ ಮಾಹಿತಿ ಸಿಗಲಿದೆ.
ಮಹಾರಾಷ್ಟ್ರದಲ್ಲಿ ಅಮಿತ್ ಶಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
October 20, 2019ಮುಂಬೈ: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಯಾಣಿಸು ತ್ತಿದ್ದ ಹೆಲಿಕಾಪ್ಟರ್ ಶನಿವಾರ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕೊನೆಯ ದಿನದ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಅಮಿತ್ ಶಾ ಅವರ ಹೆಲಿಕಾಪ್ಟರ್ ಇಂದು ಮಧ್ಯಾಹ್ನ ನಾಸಿಕ್‍ನ ಓಜರ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಮಿತ್ ಶಾ ಅವರ ಹೆಲಿಕಾಪ್ಟರ್ ನಾಸಿಕ್‍ನಿಂದ 70 ಕಿಲೋಮೀಟರ್ ದೂರದಲ್ಲಿರುವ ಅಹ್ಮದ್‍ನಗರ್ ಜಿಲ್ಲೆಯ ಅಕೋಲೆಗೆ ತೆರಳುತ್ತಿತ್ತು,…
ಒಂದೇ ಐಡಿ ಕಾರ್ಡ್‍ನಲ್ಲಿ ಆಧಾರ್, ಡಿಎಲ್, ಪಾಸ್‍ಪೋರ್ಟ್
September 24, 2019ನವದೆಹಲಿ, ಸೆ. 23- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮ ವಾರ ಆಧಾರ್‍ಗೆ ಗುಡ್ ಬೈ ಹೇಳುವ ಸುಳಿವು ನೀಡಿದ್ದು, ಆಧಾರ್, ಪಾಸ್‍ಪೋರ್ಟ್, ಡ್ರೈವಿಂಗ್ ಲೈಸೆನ್ಸ್ ಹಾಗೂ ಬ್ಯಾಂಕ್ ಖಾತೆ ಒಳಗೊಂಡ ಬಹು ಉಪಯೋಗಿ ಕಾರ್ಡ್ ಅನ್ನು ಭಾರತೀಯರಿಗೆ ನೀಡುವ ಬಗ್ಗೆ ಮಾತನಾಡಿದ್ದಾರೆ. 2021ರ ಜನಗಣತಿ ಮೊಬೈಲ್ ಅಪ್ಲಿಕೇಶನ್ ಮೂಲಕ ನಡೆಯಲಿದೆ ಎಂದು ಸಹ ಅಮಿತ್ ಶಾ ಹೇಳಿದ್ದಾರೆ. ಇಂದು ದೆಹಲಿಯಲ್ಲಿ ಜನಗಣತಿ ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗಿಯಾಗಿ ಮಾತ ನಾಡಿದ ಅಮಿತ್ ಶಾ,…
ಮಧ್ಯಂತರ ಚುನಾವಣೆಗೆಸಿದ್ಧರಾಗಿ: ಅಮಿತ್ ಷಾ
July 26, 2019ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರ ರಚನೆ ಅನುಮಾನ. ರಾಷ್ಟ್ರಪತಿ ಆಡಳಿತ ಇಲ್ಲವೇ ಮಧ್ಯಂತರ ಚುನಾವಣೆಗೆ ಸಿದ್ಧರಾಗಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದಾರೆ. ಸರ್ಕಾರ ರಚನೆಗೆ ನಿಮ್ಮ ಬಳಿ ಮ್ಯಾಜಿಕ್ ಸಂಖ್ಯೆ ಇಲ್ಲ. ಅಲ್ಲಿನ ವಿಧಾನಸಭಾಧ್ಯಕ್ಷರು ಅತೃಪ್ತ 15 ಶಾಸಕರ ರಾಜೀನಾಮೆ ಇತ್ಯರ್ಥಗೊಳ್ಳುವವರೆಗೂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಸ್ಪಷ್ಟವಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆ ವಿಳಂಬವಾಗುತ್ತಿರುವ ಬಗ್ಗೆ…
ಬಿಜೆಪಿ ಚಾಣಕ್ಯನಿಗೆ `ಗೃಹ’ ಬಲ
June 1, 2019ನವದೆಹಲಿ: ನಿನ್ನೆಯಷ್ಟೇ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿಯವರು ತಮ್ಮ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಬಿಜೆಪಿಯ ಚಾಣಕ್ಯ ಎಂದೇ ಕರೆಯಲ್ಪಡುವ ಅಮಿತ್ ಶಾ ಅವರಿಗೆ ಮಹತ್ವದ ಗೃಹ ಖಾತೆಯನ್ನು ನೀಡಿದ್ದಾರೆ. ಪ್ರಧಾನಿ ಮೋದಿ ಅವರು ಸಿಬ್ಬಂದಿ, ಸಾರ್ವಜನಿಕ ಕುಂದು-ಕೊರತೆ ಮತ್ತು ಪಿಂಚಣಿ, ಪರಮಾಣು ಶಕ್ತಿ, ಬಾಹ್ಯಾಕಾಶ, ಎಲ್ಲಾ ಪ್ರಮುಖ ನೀತಿಗಳ ನಿರ್ವಹಣೆ ಖಾತೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಕರ್ನಾಟಕದಿಂದ ಕೇಂದ್ರ ಸಂಪುಟ ಸೇರಿರುವ ಡಿ.ವಿ.ಸದಾನಂದಗೌಡರಿಗೆ ಕಳೆದ ಅವಧಿಯಲ್ಲಿ ದಿವಂಗತ…
ಮೋದಿ, ಅಮಿತ್ ಶಾ ದಾಖಲೆ ಅಂತರದ ಗೆಲುವು
May 24, 2019ಮೈಸೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಷಾ ತಮ್ಮ ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಭಾರೀ ಅಂತರದ ಗೆಲುವು ದಾಖಲಿಸಿದ್ದಾರೆ. ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮೋದಿ ಅವರು ಪ್ರತಿಸ್ಪರ್ಧಿ ಎಸ್‍ಪಿ ಹಾಗೂ ಬಿಎಸ್‍ಪಿ ಮೈತ್ರಿ ಕೂಟದ ಶಾಲಿನಿ ಯಾದವ್ ವಿರುದ್ಧ 4,79,505 ಮತಗಳ ಭಾರೀ ಅಂತರದಿಂದ ಜಯ ಪಡೆದಿದ್ದಾರೆ. ಮೋದಿಗೆ 6,74,664 ಮತ ದಕ್ಕಿದ್ದರೆ, ಶಾಲಿನಿಗೆ ಕೇವಲ 1,95,159 ಮತ ಪಡೆದಿದ್ದಾರೆ. ಇನ್ನು ಗುಜರಾತ್‍ನ ಗಾಂಧಿನಗರದಿಂದ ಸ್ಪರ್ಧಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ…
ಅತಿ ದೊಡ್ಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ
May 18, 2019ನವದೆಹಲಿ: ಅತಿ ದೊಡ್ಡ ಬಹುಮತದೊಂದಿಗೆ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ನಮ್ಮ ಸರ್ಕಾರದ ಐದು ವರ್ಷಗಳ ಸಾಧನೆಗಳ ಬಗ್ಗೆ ತೃಪ್ತಿಯಿದೆ ಎಂದು ಹೇಳಿದ್ದಾರೆ. ಏಳನೇ ಹಾಗೂ ಕೊನೆಯ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬಿದ್ದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಬಿಜೆಪಿ ಕಚೇರಿ ಯಲ್ಲಿ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು….
ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಗೆದ್ದು ಬನ್ನಿ, ಮರುದಿನವೇ ಬಿ.ಎಸ್.ಯಡಿಯೂರಪ್ಪ ಸಿಎಂ ಆಗ್ತಾರೆ
February 23, 2019ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರ ರಚಿಸಲು ಬೇಡುತ್ತಾ ಕೂರುವ ಅಗತ್ಯವಿಲ್ಲ. ಲೋಕಸಭಾ ಚುನಾವಣೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಿಸಿ, ಮರು ದಿನವೇ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಅಧಿಕಾರ ಗದ್ದುಗೆ ಹಿಡಿಯುತ್ತದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸ್ಥಳೀಯ ನಾಯಕರಿಗೆ ತಿಳಿಸಿದ್ದಾರೆ. ನಿನ್ನೆ ತಡರಾತ್ರಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅಮಿತ್ ಷಾ, ನೇರವಾಗಿಯೇ ಆಪರೇಷನ್ ಕಮಲ ಕಾರ್ಯಾಚರಣೆ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ನಾವೇ ಸರ್ಕಾರ ರಚಿಸಬೇಕಿತ್ತು. ಆದರೆ ಸಂವಿಧಾನ…
ಕಚ್ಚಾಡಿಕೊಳ್ಳುತ್ತಿದ್ದ ಬಿಜೆಪಿ-ಶಿವಸೇನೆ ಮತ್ತೆ ಮೈತ್ರಿ
February 19, 2019ಮುಂಬೈ:ಈವರೆಗೂ ಪರಸ್ಪರ ಕಚ್ಚಾಡಿಕೊಳ್ಳುತ್ತಿದ್ದ ಬಿಜೆಪಿ-ಶಿವಸೇನೆ ಲೋಕ ಸಭಾ ಚುನಾವಣೆಗೆ ಮತ್ತೆ ಮೈತ್ರಿ ಮಾಡಿಕೊಂಡಿದ್ದು, ಸ್ಥಾನ ಹಂಚಿಕೆಯನ್ನೂ ಘೋಷಣೆ ಮಾಡಿವೆ. ಫೆ.18ರಂದು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಲೋಕಸಭಾ ಚುನಾವಣೆ ಸಂಬಂಧ ನಡೆಸಿರುವ ಮಾತುಕತೆ ಯಶಸ್ವಿಯಾಗಿದ್ದು, ಬಿಜೆಪಿ ಮಹಾರಾಷ್ಟ್ರದಲ್ಲಿ 25 ಸ್ಥಾನಗಳಲ್ಲಿ ಸ್ಪರ್ಧಿಸಿದರೆ ಶಿವಸೇನೆ 23 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಜೆಪಿ ಹಾಗೂ ಶಿವಸೇನೆಯ ಕೋಟ್ಯಂತರ ಕಾರ್ಯಕರ್ತರು ಉಭಯ ಪಕ್ಷಗಳ ನಡುವೆ ಮೈತ್ರಿಯನ್ನು ಬಯಸುತ್ತಿದ್ದರು. ಶಿವಸೇನೆ ಬಿಜೆಪಿಯ ಅತಿ ಹಳೆಯ…