ಮೈಸೂರು: ವರ್ಗಾವಣೆಗೊಂಡ ತಾವು ಕರ್ತವ್ಯಕ್ಕೆ ವರದಿ ಮಾಡಿ ಕೊಳ್ಳುವ ಸಂಬಂಧ ದೂರವಾಣಿ ಮೂಲಕ ಸಂಪರ್ಕಿಸಿದಾಗ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್, ತಮಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಅವಮಾನಿಸಿದ್ದಾರೆ ಎಂದು ಪೊಲೀಸ್ ಇನ್ಸ್‍ಪೆಕ್ಟರ್ ಸಿ.ವಿ.ರವಿ ಅವರು ಗುರುವಾರ ದಕ್ಷಿಣ ವಲಯ ಐಜಿಪಿ ಕೆ.ವಿ. ಶರತ್‍ಚಂದ್ರ ಅವರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೂ ದೂರಿನ ಪ್ರತಿ ರವಾನಿ ಸಿರುವ ರವಿ ಅವರು, ಜನವರಿ 14ರಂದು ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು,…