ಮೈಸೂರು: ನಿವೃತ್ತಿ ಯಾದ ಅಂಗನವಾಡಿ ಕಾರ್ಯಕರ್ತೆ ಯರು ಹಾಗೂ ಸಹಾಯಕಿಯರಿಗೆ ಕನಿಷ್ಠ 3 ಸಾವಿರ ರೂ. ಮಾಸಿಕ ಪಿಂಚಣಿ ನೀಡ ಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್‍ನ (ಎಐಟಿ ಯುಸಿ ಅಂಗ ಸಂಘಟನೆ) ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಅಂಗನ ವಾಡಿ ಕಾರ್ಯಕರ್ತೆಯರು ಹಾಗೂ ಸಹಾ ಯಕಿಯರು ದುಡಿದಿದ್ದಾರೆ. ಆ ಮೂಲಕ ಸರ್ಕಾರದ ಯೋಜನೆಗಳನ್ನು ಫಲಾನು ಭವಿಗಳಿಗೆ ತಲುಪಿಸುವಲ್ಲಿ…
ಅಂಗನವಾಡಿ ಕಾರ್ಯಕರ್ತೆಯರಿಂದ ಕೊಡಗಿನ ನಿರಾಶ್ರಿತರಿಗೆ ನೆರವು
August 27, 2018ಮೈಸೂರು: ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಬದುಕನ್ನೇ ಕಳೆದುಕೊಂಡಿರುವ ಸಂತ್ರಸ್ತರ ನೆರವಿಗೆ ಬಡವ-ಬಲ್ಲಿದ ಎನ್ನದೆ ಎಲ್ಲರೂ ಕೈಜೋಡಿಸುತ್ತಿದ್ದಾರೆ. ಮೈಸೂರಿನ ಪುರಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ತೆರೆಯಲಾಗಿರುವ ನೆರವು ಸಂಗ್ರಹ ಕೇಂದ್ರಕ್ಕೂ ಸಹೃದಯಿಗಳು ಅಗತ್ಯ ವಸ್ತುಗಳನ್ನು ತಂದು ನೀಡುತ್ತಿದ್ದಾರೆ. ಹಾಗೆಯೇ ಪಿರಿಯಾಪಟ್ಟಣ ತಾಲೂಕಿನ ಅನೇಕ ಅಂಗನವಾಡಿ ಕಾರ್ಯಕರ್ತರು ಹಾಗೂ ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳ ಸದಸ್ಯರು ಸುಮಾರು 20 ಸಾವಿರ ರೂ.ಗಳನ್ನು ಒಟ್ಟುಗೂಡಿಸಿ, ಅದರಲ್ಲಿ 40 ಬ್ಲಾಂಕೆಟ್‍ಗಳನ್ನು ಖರೀದಿಸಿ, ನೆರವು ಸಂಗ್ರಹ ಕೇಂದ್ರಕ್ಕೆ ನೀಡಿದ್ದಾರೆ. ತಮ್ಮ ಅತ್ಯಲ್ಪ ವೇತನದಲ್ಲಿ ಕುಟುಂಬ ನಿರ್ವಹಿಸುವುದೇ…
ತಮ್ಮ ವಿವಿಧ ಬೇಡಿಕೆಗೆ ಸ್ಪಂದಿಸದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
July 26, 2018ಮೈಸೂರು: ಮೈಸೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸರ್ವಾಧಿಕಾಯಂತೆ ವರ್ತಿಸುತ್ತಿದ್ದಾರೆ ಎಂದು ಖಂಡಿಸಿ, ಜೊತೆಗೆ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‍ನ ಕಾರ್ಯಕರ್ತೆಯರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇಲಾಖೆ ಕೆಲಸಗಳ ಬಗ್ಗೆ ಅಸಡ್ಡೆ ಧೋರಣೆ ಅನುಸರಿಸುತ್ತಿದ್ದಾರೆ. ಇದರ ಫಲವಾಗಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರಿಗೆ ಸಲ್ಲಬೇಕಾದ ಹಲವಾರು ಸೌಲಭ್ಯಗಳನ್ನು ವಂಚಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಉಡಾಫೆ ಉತ್ತರ…
ಅನುದಾನ ಕಡಿತ, ಖಾಸಗೀಕರಣಕ್ಕೆ ವಿರೋಧ ಅಂಗನವಾಡಿ ಕಾರ್ಯಕರ್ತರ ಬೃಹತ್ ಪ್ರತಿಭಟನೆ
July 11, 2018ಮಂಡ್ಯ: ಅನುದಾನ ಕಡಿತ, ಖಾಸಗೀಕರಣಕ್ಕೆ ವಿರೋಧ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗರ ದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು. ಅಂಗನವಾಡಿ ನೌಕರರ ಸಂಘದ ಜಿಲ್ಲಾ ಸಮಿತಿ ಮತ್ತು ಸಿಐಟಿಯು ನೇತೃತ್ವದಲ್ಲಿಂದು ಬೆಳಿಗ್ಗೆ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಸಮಾವೇಶಗೊಂಡ ಬೃಹತ್ ಸಂಖ್ಯೆ ಯಲ್ಲಿದ್ದ ಪ್ರತಿಭಟನಾಕಾರರು ಬೆಂಗಳೂರು -ಮೈಸೂರು ಹೆದ್ದಾರಿ ಮೂಲಕ ಮೆರವಣಿಗೆ ನಡೆಸಿದರು. ಬಳಿಕ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಧರಣಿ ನಡೆಸಿದರು. ಅಂಗನವಾಡಿ ನೌಕರರ ಬೇಡಿಕೆ ಈಡೇ ರಿಸದೆ ದಿಕ್ಕು…
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ ಅಂಗನವಾಡಿ ನೌಕರರ ಭಾರೀ ಪ್ರತಿಭಟನೆ
July 11, 2018ಚಾಮರಾಜನಗರ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸು ವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವ ಹಿಸುತ್ತಿರುವ ಅಂಗನವಾಡಿ ನೌಕರರು ಹಾಗೂ ಸಹಾಯಕಿಯರು ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಇಲ್ಲಿನ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಾವಿರಾರು ಅಂಗನವಾಡಿ ನೌಕರರು ಹಾಗೂ ಸಹಾಯಕಿಯರು ಜಮಾಯಿಸಿದರು. ನಂತರ ಘೋಷಣೆಗಳನ್ನು ಕೂಗುತ್ತಾ, ಸಾಲಾಗಿ ಪ್ರತಿಭಟನಾ ಮೆರವಣಿಗೆ ಆರಂಭಿಸಿದರು. ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವ…
ಅಂಗನವಾಡಿ ನೌಕರರಿಂದ ಡಿಸಿ ಕಚೇರಿ ಚಲೋ
July 11, 2018ಹಾಸನ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವ ದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘ ಸಾವಿರಾರು ಕಾರ್ಯಕರ್ತರು ಡಿಸಿ ಕಚೇರಿ ಚಲೋ ನಡೆಸಿದರು. ನಗರದ ಹೇಮಾವತಿ ಪ್ರತಿಮೆ ಬಳಿ ಹಿರಿಯ ಸಂಘಟಕಿ ಸೌಭಾಗ್ಯ ಬೃಹತ್ ಬ್ಯಾನರ್‍ನಲ್ಲಿ ಸಹಿ ಮಾಡುವುದರ ಮೂಲಕ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಅಲ್ಲಿಂದ ಭಾರೀ ಮೆರವಣಿಗೆ ಹೊರಟ ಪ್ರತಿಭಟ ನಾಕಾರರು, ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರಲ್ಲದೆ, ಆವರಣದಲ್ಲಿ ಜಮಾವಣೆಗೊಂಡು ಬೇಡಿಕೆ ಈಡೇರಿಕೆಗೆ ಘೋಷಣೆ ಕೂಗಿದರು. ಐಸಿಡಿಎಸ್ ಯೋಜನೆಯಡಿಯಲ್ಲಿ ಕೆಲಸ…
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
July 8, 2018ಅರಸೀಕೆರೆ: ವಿವಿಧ ಬೇಡಿಕೆ ಈಡೇರಿಸುವಂತೆ ನಗರದಲ್ಲಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಎಐಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಪ್ರವಾಸಿ ಮಂದಿರದಿಂದ ಮೆರ ವಣಿಗೆ ಹೊರಟ ಪ್ರತಿಭಟನಾಕಾರರು, ಸಿಡಿಪಿಓ ಕಚೇರಿಯಲ್ಲಿ ಕೆಲಕಾಲ ಪ್ರತಿಭಟಿಸಿ ನಂತರ ತಾಲೂಕು ಕಚೇರಿಯಲ್ಲಿ ಜಮಾಯಿಸಿ ಬೇಡಿಕೆ ಈಡೇರಿಕೆ ಆಗ್ರಹಿಸಿದರು. ಎಐಟಿಯುಸಿ ರಾಜ್ಯಾಧ್ಯಕ್ಷ ಹೆಚ್.ಕೆ. ರಾಮಚಂದ್ರಪ್ಪ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಅಂಗನ ವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿಲ್ಲ. ಅತೀ ತುರ್ತಾಗಿ ಕಟ್ಟಡಗಳು ನಿರ್ಮಾಣ ವಾಗಬೇಕಿದೆ. ಮಿನಿ ಅಂಗನವಾಡಿ ಕೇಂದ್ರ ಗಳಿಗೆ ಸಹಾಯಕಿಯರನ್ನು ತುರ್ತಾಗಿ…
ಜು.10 ರಂದು ಅಂಗನವಾಡಿ ನೌಕರರ ಪ್ರತಿಭಟನೆ
July 6, 2018ಹಾಸನ: ಅಂಗನವಾಡಿ ನೌಕರರ ಬೇಡಿಕಾ ದಿನಾಚರಣೆ ಅಂಗವಾಗಿ ಜು. 10ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳ ಲಾಗಿದೆ ಎಂದು ಸಿಐಟಿಯು ಸಂಘ ಟನೆಯ ಪ್ರಧಾನ ಕಾರ್ಯದರ್ಶಿ ಡಿ.ಎಲ್. ರಾಘವೇಂದ್ರ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಐಸಿಡಿಎಸ್ ಯೋಜನೆಯಡಿ ಕೆಲಸ ಮಾಡುವ ಅಂಗನ ವಾಡಿ ನೌಕರರನ್ನು ಅತ್ಯಂತ ಕಡಿಮೆ ಸೌಲಭ್ಯ ದಿಂದ ಹೆಚ್ಚಿನ ಸಮಯ ಕೆಲಸವನ್ನು ಎಲ್ಲ ಇಲಾಖೆಗಳು ಮಾಡಿಸಿಕೊಳ್ಳುತ್ತಿದೆ. ಸರ್ವೇ ಗಳು,…