ರಾಮನಗರ: ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ಮೇಲೆ ಮುನಿಸಿಕೊಂಡಿದ್ದು ಈಗ ಅವರ ಪತ್ನಿ ಕೂಡ ಮಾಧ್ಯಮಗಳ ವಿರುದ್ಧ ಗರಂ ಆಗಿದ್ದಾರೆ. ಎಲ್ಲದರಲ್ಲೂ ತಪ್ಪು ಹುಡುಕುವುದನ್ನು ಬಿಡಿ ಎಂದು ಮಾಧ್ಯಮಗಳ ವಿರುದ್ಧ ಶಾಸಕಿ ಅನಿತಾ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕ್ಷೇತ್ರಕ್ಕೆ ಆಗಮಿಸಿದ ವೇಳೆ, ಮಾಧ್ಯಮದವರ ಬಳಿ ಮಾತನಾಡಲು ಏನಿದೆ, ನಮ್ಮ ಕೆಲಸ ಮಾಡಲು ಬಂದಿದ್ದೇವೆ. ಇತ್ತೀಚೆಗೆ ಎಲೆಕ್ಟ್ರಾನಿಕ್ ಮೀಡಿಯಾ ದವರು ಹಾಳಾಗಿದ್ದೀರಿ. ಇದೇ ವಿಚಾರಕ್ಕೆ ಸಿಎಂ ಕುಮಾರಸ್ವಾಮಿಯವರಿಗೆ ನಿಮ್ಮ ಬಗ್ಗೆ ಬಹಳ ಬೇಸರವಿದೆ. ಇಲ್ಲದೇ ಇರುವ ತಲೆಹರಟೆ ಪ್ರಶ್ನೆ ಕೇಳುತ್ತೀರಿ. ಮಾಧ್ಯಮದವರ…