ಎಲ್ಲಾ ವರ್ಗಗಳಿಗೆ ಪ್ರೀತಿ ಪಾತ್ರರಾಗಿದ್ದರು: ಎನ್.ರಾಚಯ್ಯರ ಬಗ್ಗೆ ಮಾಜಿ ಸಚಿವ ಆಂಜನೇಯ ಗುಣಗಾನ ಮೈಸೂರು: ಹೆಮ್ಮೆಯ ರಾಜಕಾರಣಿಯಾಗಿ ಎಲ್ಲಾ ವರ್ಗಗಳ ಪ್ರೀತಿಗೆ ಪಾತ್ರರಾಗಿದ್ದ ಎನ್.ರಾಚಯ್ಯ ಅವರ ಸಾಮಾಜಿಕ ಬದ್ಧತೆ, ಸಾಧನೆ ಹಾಗೂ ಕೊಡುಗೆಗಳನ್ನು ಯುವ ಪೀಳಿಗೆಗೆ ತಿಳಿಸಿಕೊಡುವ ಅಗತ್ಯವಿದೆ ಎಂದು ಮಾಜಿ ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಅಭಿಪ್ರಾಯಪಟ್ಟರು. ಮೈಸೂರು ವಿವಿಯ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ವತಿಯಿಂದ ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗಕ್ಕೆ ರಾಜ್ಯ ಸರ್ಕಾರ ಮಂಜೂರು ಮಾಡಿರುವ ಎನ್.ರಾಚಯ್ಯ…