ಕೆ.ಆರ್.ಪೇಟೆ: ಪಟ್ಟಣದ ಕೆರೆ ಬೀದಿಯ ಮುಕ್ಕಟ್ಟೆ ಚೌಕದ ಬಳಿ ಶ್ರೀಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವ ಸ್ಥಾನ ಟ್ರಸ್ಟ್ ವತಿಯಿಂದ ನೂತನವಾಗಿ 30ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ 51 ಅಡಿ ಎತ್ತರದ ಆಂಜನೇಯಸ್ವಾಮಿ ವಿಗ್ರಹ ಲೋಕಾರ್ಪಣೆಗೆ ಸಜ್ಜುಗೊಂಡಿದೆ. ಜೂ. 15, 16, 17ರಂದು ಧಾರ್ಮಿಕ ವಿಶೇಷ ಪೂಜಾ ಕೈಂಕರ್ಯಗಳು ಜರುಗ ಲಿದೆ. ಕೊನೆಯ ದಿನದಂದು ಮಹಾ ಮಂಗಳಾ ರತಿ ಆದ ನಂತರ ದೇವಸ್ಥಾನಕ್ಕೆ ಭೇಟಿ ನೀಡುವ ಎಲ್ಲರಿಗೂ ಮಹಾ ಮಸ್ತಕಾಭಿಷೇಕದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸಲಾಗಿದೆ. ಅಭಿಷೇಕ ಮಾಡಲು ವಿಶೇಷ ಮೆಟ್ಟಿಲು…