ಮೈಸೂರು: ತರಕಾರಿ ಬೆಲೆ ದಿಢೀರ್ ಕುಸಿತ ವಾದ ಹಿನ್ನೆಲೆಯಲ್ಲಿ ಭಾನುವಾರ ರೈತರು ಬಂಡಿಪಾಳ್ಯದಲ್ಲಿರುವ ಎಪಿಎಂಸಿಯ ಉಪಕಚೇರಿಯ ಬಳಿ ರೈತರು ನೆಲಕ್ಕೆ ತರಕಾರಿ ಸುರಿದು ಪ್ರತಿಭಟನೆ ನಡೆಸಿದರು. ಮೈಸೂರು ತಾಲೂಕು ಸೇರಿದಂತೆ ವಿವಿಧೆಡೆಗಳಿಂದ ಭಾನುವಾರ ತಾವು ಬೆಳೆದಿದ್ದ ತರಕಾರಿಗಳನ್ನು ಮಾರಾಟ ಮಾಡಲು ತಂದಿದ್ದ ನೂರಾರು ರೈತರು ಬೆಲೆ ಕುಸಿತದಿಂದ ಕಂಗೆಟ್ಟು ಪ್ರತಿಭಟನೆ ನಡೆಸಿದರು. ಕಳೆದ ಮೂರು ದಿನದ ಹಿಂದೆ ಇದ್ದ ಬೆಲೆಗೂ ಇಂದು ನಿಗದಿಯಾದ ಬೆಲೆಗೂ ಶೇ.50ರಿಂದ 60ರಷ್ಟು ಕಡಿಮೆಯಾಗಿದ್ದರಿಂದ ರೊಚ್ಚಿಗೆದ್ದ ರೈತರು ಎಪಿಎಂಸಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು….
ಅದೃಷ್ಟದಾಟದಲ್ಲಿ ‘ಕೈ’ಗೊಲಿದ ಮೈಸೂರು ಎಪಿಎಂಸಿ ಅಧ್ಯಕ್ಷ ಸ್ಥಾನ
October 28, 2018ಮೈಸೂರು: ದೋಸ್ತಿ ಪಕ್ಷಗಳಿಗೆ ಪ್ರತಿಷ್ಟೆಯಾಗಿ, ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರಿನ ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾ ವಣೆಯಲ್ಲಿ ಲಾಟರಿ ಮೂಲಕ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಜೆಡಿಎಸ್ ಉಪಾಧ್ಯಕ್ಷ ಸ್ಥಾನಕ್ಕೆ ತೃಪ್ತಿಪಡುವಂತಾಗಿದೆ. ಮೈಸೂರು-ನಂಜನಗೂಡು ಮುಖ್ಯರಸ್ತೆಯ ಬಂಡಿಪಾಳ್ಯದಲ್ಲಿರುವ ಎಪಿಎಂಸಿ ಕಚೇರಿಯಲ್ಲಿ ತಹಶೀಲ್ದಾರ್ ಟಿ.ರಮೇಶ್ ಬಾಬು ಸಮ್ಮುಖದಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಪ್ರಭುಸ್ವಾಮಿ ಎಪಿಎಂಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದರೆ, ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಜವರಪ್ಪ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ…
ಎಪಿಎಂಸಿ ನೂತನ ಅಧ್ಯಕ್ಷರಾಗಿ ಲಕ್ಷ್ಮಮ್ಮ, ಉಪಾಧ್ಯಕ್ಷರಾಗಿ ಹೆಚ್.ಪಿ. ಕೆಂಡಗಣ್ಣಪ್ಪ ಅವಿರೋಧ ಆಯ್ಕೆ
October 16, 2018ನಂಜನಗೂಡು: ನಂಜನಗೂಡು ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನೂತನ ಅಧ್ಯಕ್ಷರಾಗಿ ವರುಣಾ ಕ್ಷೇತ್ರದ ಲಕ್ಷ್ಮಮ್ಮ, ಉಪಾಧ್ಯಕ್ಷರಾಗಿ ನಂಜನಗೂಡು ಕ್ಷೇತ್ರದ ಹೆಚ್.ಪಿ.ಕೆಂಡಗಣ್ಣಪ್ಪ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾ ವಣೆ ಅಧಿಕಾರಿ ತಹಸೀದ್ದಾರ್ ದಯಾನಂದ್ ತಿಳಿಸಿದ್ದಾರೆ. 20 ತಿಂಗಳ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಹುಲ್ಲಹಳ್ಳಿ ಎಲ್. ಮಾದಪ್ಪ, ಉಪಾಧ್ಯಕ್ಷರಾಗಿ ಹದಿನಾರು ಸಿದ್ದರಾಜು ಅವಿರೋಧವಾಗಿ ಆಯ್ಕೆ ಯಾಗಿದ್ದರು. ಇಂದು ಎಪಿಎಂಸಿಯಲ್ಲಿ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ಯಲ್ಲಿ ಕಾಂಗ್ರೆಸ್ ವರಿಷ್ಠರ ನಿರ್ದೇಶನದಂತೆ ಅಧ್ಯಕ್ಷ, ಉಪಾಧ್ಯಕ್ಷರ…
ಎಪಿಎಂಸಿ: ಆನ್‍ಲೈನ್ ವ್ಯವಸ್ಥೆಯಿಂದ ರೈತರಿಗೆ ಉತ್ತಮ ಬೆಲೆ
October 5, 2018ಗೋಣಿಕೊಪ್ಪಲು: ಪ್ರಧಾನಿ ನರೇಂದ್ರ ಮೋದಿ ಚಿಂತನೆಯಂತೆ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಆನ್‍ಲೈನ್ ವ್ಯವಸ್ಥೆ ಯಿಂದಾಗಿ ಮಾರುಕಟ್ಟೆ ಆವರಣ ದಲ್ಲಾಳಿ ಗಳಿಂದ ಮುಕ್ತವಾಗುವಂತಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಆಯೋಜಿಸಿದ್ದ ಪ್ರಗತಿಪರ ರೈತರು ಹಾಗೂ ವರ್ತಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರಿಗೆ ಮಾರುಕಟ್ಟೆಯಿಂದ ಉತ್ತಮ ಧಾರಣೆ ದೊರಕುವಂತಾಗಬೇಕು, ದಲ್ಲಾಳಿ ಗಳ ಮಧ್ಯಸ್ಥಿಕೆಯಿಂದ ಅನುಭವಿಸುತ್ತಿದ್ದ ನಷ್ಟವನ್ನು ಹೋಗಲಾಡಿಸಲು ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯವನ್ನು ಮಾದರಿ ಪ್ರಯೋಗವನ್ನಾಗಿಸಿ ಆನ್‍ಲೈನ್ ಮಾರು…
ಇಂದು ಬಂಡಿಪಾಳ್ಯ ಎಪಿಎಂಸಿ ವರ್ತಕರಿಂದ ಬಂದ್
July 27, 2018ಮೈಸೂರು: ಲಾರಿ ಮುಷ್ಕರ ಗುರುವಾರ 7ನೇ ದಿನಕ್ಕೆ ಕಾಲಿಟ್ಟಿದ್ದು, ಇಂದೂ ಕೂಡ ಯಾವುದೇ ಲಾರಿಗಳ ಸಂಚಾರ ಇರಲಿಲ್ಲ. ಈ ಮಧ್ಯೆ ಲಾರಿ ಮುಷ್ಕರ ಬೆಂಬಲಿಸಿ ಮೈಸೂರಿನ ಬಂಡೀಪಾಳ್ಯದ ಎಪಿಎಂಸಿ ವರ್ತಕರು ನಾಳೆ (ಜು.27) ಇಡೀ ದಿನ ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ದೇಶಾದ್ಯಂತ ನಡೆದಿರುವ ಲಾರಿ ಮುಷ್ಕರಕ್ಕೆ ಮೈಸೂರಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತ ವಾಗಿದ್ದು, ಹೊರ ರಾಜ್ಯಗಳಿಂದ ಇಲ್ಲಿಗೆ ಹಾಗೂ ಇಲ್ಲಿಂದ ಹೊರ ರಾಜ್ಯಗಳಿಗೆ ಯಾವುದೇ ಲಾರಿಗಳ ಸಂಚಾರ…
ಇನ್ನೆರಡು ದಿನ ಕಳೆದರೆ ಹಣ್ಣು, ದಿನಸಿ ಪದಾರ್ಥಗಳ ಕೊರತೆ ಸಾಧ್ಯತೆ
July 25, 2018ಮೈಸೂರು: ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಲಾರಿ ಮಾಲೀಕರು ನಡೆಸುತ್ತಿರುವ ಅನಿರ್ದಷ್ಟಾ ವಧಿಯ ಲಾರಿ ಮುಷ್ಕರ ಮಂಗಳವಾರ 5 ದಿನಕ್ಕೆ ಕಾಲಿಟ್ಟಿತು. ಮುಷ್ಕರದ ಹಿನ್ನೆಲೆ ಯಲ್ಲಿ ಮೈಸೂರಿನ ಬಂಡಿಪಾಳ್ಯದ ಎಪಿಎಂಸಿ ಮತ್ತು ಬಂಬೂ ಬಜಾರ್‍ನ ಆರ್‌ಎಂಸಿ ಮಾರುಕಟ್ಟೆಗಳಲ್ಲಿ ತರಕಾರಿ, ಹಣ್ಣು ಇನ್ನಿತರ ದಿನಸಿ ಪದಾರ್ಥಗಳ ಕೊರತೆ ಕಾಣತೊಡಗಿದೆ. ಮುಷ್ಕರ ಆರಂಭಕ್ಕೂ ಮುನ್ನ ಲಾರಿಗಳಲ್ಲಿ ತಂದಿ ಳಿಸಲಾಗಿದ್ದ ಆಹಾರ ಪದಾರ್ಥಗಳು, ಹಣ್ಣು ಮುಗಿಯುವ ಹಂತಕ್ಕೆ ಬಂದಿದ್ದು, ಇನ್ನೆರಡು ದಿನಗಳಲ್ಲಿ ಇದರ ಪರಿಣಾಮ ಜನಜೀವ ನದ ಮೇಲೆ ಆಗುವ ಸಂಭವವಿದೆ. ಈ…
ಎಪಿಎಂಸಿ ಸರ್ವತೋಮುಖ ಅಭಿವೃದ್ಧಿಗೆ ಬದ್ಧ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು
July 15, 2018ಪಾಂಡವಪುರ: ಪಟ್ಟಣದ ಎಪಿಎಂಸಿ ಸರ್ವತೋಮುಖ ಅಭಿವೃದ್ಧಿಗೆ ನಾನು ಬದ್ಧನಾಗಿದ್ದು, ಎಪಿಎಂಸಿ ಆಡಳಿತ ಮಂಡಳಿ ಕೇಳಿರುವ ಹಣಕ್ಕಿಂತ ಹೆಚ್ಚಿನ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸುತ್ತೇನೆ ಎಂದು ಸಣ್ಣ ನೀರಾವರಿ ಸಿ.ಎಸ್.ಪುಟ್ಟರಾಜು ತಿಳಿಸಿದರು. ಪಟ್ಟಣದ ಹಾರೋಹಳ್ಳಿ ಬಳಿಯ ಎಪಿಎಂಸಿಯಲ್ಲಿ ಆಡಳಿತ ಮಂಡಳಿ ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಎಪಿಎಂ ಎಸಿ ರೈತರ ಬೆನ್ನೆಲುಬಾಗಿ ಕೆಲಸ ಮಾಡುವ ಸಂಸ್ಥೆಯಾಗಿದೆ. ಪಾಂಡವಪುರ ಎಪಿಎಂಸಿ ಅಭಿವೃದ್ಧಿಗೆ ಸರ್ಕಾರದಿಂದ 4 ಕೋಟಿ ಹಣ ಬಿಡುಗಡೆ ಮಾಡಿಸಿ ಕೊಡುವಂತೆ ಆಡಳಿತ…
ಎಪಿಎಂಸಿಯಲ್ಲಿ ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕ: ರೈತರ ಪರದಾಟ
July 5, 2018ಗುಂಡ್ಲುಪೇಟೆ: ಪಟ್ಟಣದ ಹೊರ ವಲಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿದ್ದರೂ ಸಹ ಕುಡಿಯಲು ನೀರು ದೊರ ಕುತ್ತಿಲ್ಲ ಹಾಗೂ ಶುಚಿತ್ವ ಕಾಪಾಡುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ಮಾರುಕಟ್ಟೆ ಪ್ರಾಂಗಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ತೆರೆಯಲಾಯಿತು. ಇಲ್ಲಿಗೆ ಬರುವ ಕಾರ್ಮಿ ಕರು, ರೈತರು, ವರ್ತಕರು ಹಾಗೂ ವಾಹನ ಗಳ ಚಾಲಕರು ಇಲ್ಲಿ ತಮ್ಮ ದಾಹ ತಣಿಸಿ ಕೊಳ್ಳಲು ಸಾಧ್ಯವಾಗಿತ್ತು. ಆದರೆ ಇದನ್ನು ಸರಿಯಾಗಿ ನಿರ್ವಹಣೆ ಮಾಡದ…
ದುರ್ವಾಸನೆ ಬೀರುತ್ತಿರುವ ಬಂಡಿಪಾಳ್ಯ ಎಪಿಎಂಸಿ ಆವರಣ
June 29, 2018ಮೈಸೂರು: ಕೊಳೆತು ದುರ್ವಾಸನೆ ಬೀರುತ್ತಿರುವ ತ್ಯಾಜ್ಯ, ಉಪಯೋಗಕ್ಕೆ ಬಾರದ ಶೌಚಾಲಯ, ರಾಡಿಯಿಂದ ಕೂಡಿದ ರಸ್ತೆಗಳು, ಜತೆಗೆ ಜುಯ್ ಎಂದು ಮುತ್ತಿಕೊಳ್ಳುವ ನೊಣಗಳು ಹೀಗೆ ಹತ್ತು ಹಲವು ಸಮಸ್ಯೆಗಳ ಆಗರ ಬಂಡಿಪಾಳ್ಯದ ಎಪಿಎಂಸಿ ಮಾರುಕಟ್ಟೆ. ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಬಂಡಿಪಾಳ್ಯ ಎಪಿಎಂಸಿ ಮಾರುಕಟ್ಟೆ ಬೃಹತ್ ಮಾರುಕಟ್ಟೆಯಾಗಿ ಗುರುತಿಸಿಕೊಂಡಿದೆ. ಮೈಸೂರು ಸುತ್ತಮುತ್ತ ಮಾತ್ರವಲ್ಲದೆ ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳಿಂದ ಪ್ರತಿ ನಿತ್ಯ ತರಕಾರಿ, ಮಹಾರಾಷ್ಟ್ರ ಮತ್ತಿತರೆ ರಾಜ್ಯಗಳಿಂದ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ತಂದು ಮಾರಾಟ ಮಾಡಲಾಗುತ್ತದೆ. ಜತೆಗೆ ನೂರಾರು ಮಂದಿ ಸಾರ್ವಜನಿಕರು…
ರಾಜ್ಯದಲ್ಲೇ ಎಪಿಎಂಸಿ ಎಳನೀರು ಮಾರುಕಟ್ಟೆ ನಂಬರ್ ಒನ್
June 27, 2018ಮದ್ದೂರು: ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆಯುತ್ತಿರುವ 1.5ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಎಪಿಎಂಸಿ ಅಧ್ಯಕ್ಷ ಕುದರಗುಂಡಿ ನಾಗೇಶ್, ಉಪಾಧ್ಯಕ್ಷೆ ಮಮತಾ ಶಂಕರೇಗೌಡ ವೀಕ್ಷಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿಯೇ ಎಪಿಎಂಸಿ ಎಳನೀರು ಮಾರುಕಟ್ಟೆ ನಂಬರ್ ಒನ್ ಆಗಿದೆ. ಈ ಹಿಂದೆ ಮಾರುಕಟ್ಟೆಯ ರಸ್ತೆ ಸಂಪೂರ್ಣ ಹಾಳಾಗಿ ಧೂಳುಮಯವಾಗಿತ್ತು. ಪ್ರತಿನಿತ್ಯ ವಹಿವಾಟಿಗೆ ತೊಂದರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ 1.5ಕೋಟಿ ರೂ. ಬಿಡುಗಡೆಗೊಂಡು ಗುಣಮಟ್ಟದ ರಸ್ತೆ ನಿರ್ಮಾಣವಾಗುತ್ತಿದೆ ಎಂದರು. ಈ ಸಂದರ್ಭ ಎಪಿಎಂಸಿ ನಿರ್ದೇಶಕರಾದ ಕರಿಯಪ್ಪ, ಮಹೇಂದ್ರ, ಎಪಿಎಂಸಿ ಕಾರ್ಯದರ್ಶಿ…