ನವದೆಹಲಿ: ಭಾರತದ ಕ್ರಿಕೆಟ್ ನಾಯಕ ವಿರಾಟ್ ಕೊಹ್ಲಿ ಮತ್ತು ವಿಶ್ವ ಚಾಂಪಿಯನ್ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರಿಗೆ ಭಾರತ ಕ್ರೀಡಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನ ಪುರಸ್ಕಾರ ಲಭಿಸಿದೆ. ಇದೇ ಸೆಪ್ಟೆಂಬರ್ 25 ರಂದು ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಖೇಲ್ ರತ್ನ ಪುರಸ್ಕಾರಕ್ಕೆ ಕೊಹ್ಲಿ ಹಾಗೂ ಮೀರಾಬಾಯಿ ಪಾತ್ರವಾಗಿರುವುದನ್ನು ಕ್ರೀಡಾ ಸಚಿವಾಲಯ ಗುರುವಾರ ಸ್ಪಷ್ಟಪಡಿಸಿದೆ. ಇನ್ನು ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಸೇರಿ 20 ಕ್ರೀಡಾಳುಗಳಿಗೆ ಅರ್ಜುನ ಪ್ರಶಸ್ತಿ ಲಭಿಸಿದೆ….