ಮೈಸೂರು: ನಿವೃತ್ತ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ರಾಜ್ಯ ಸರ್ಕಾರ ‘ಆರೋಗ್ಯ ಭಾಗ್ಯ ಯೋಜನೆ’ ರೂಪಿಸಿ 10 ಕೋಟಿ ರೂ. ಮಂಜೂರು ಮಾಡಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಮೈಸೂರು-ಚಾಮರಾಜನಗರ ಘಟಕದ ಅಧ್ಯಕ್ಷ ಎಂ.ಸಿ.ಮರಿಸ್ವಾಮಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಮಾತನಾಡಿದ ಅವರು, ನಿವೃತ್ತ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ರಾಜ್ಯದಲ್ಲಿ ತಾವು ನೆಲೆಸಿರುವ ಜಿಲ್ಲೆ ಮತ್ತು ನಗರದಲ್ಲಿರುವ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಸದಸ್ಯತ್ವ ಪಡೆದು, ಮಾಸಿಕ ವಂತಿಗೆ ಪಾವತಿ ಮಾಡುವ…