ಮೈಸೂರು: ಅಂಬೇಡ್ಕರ್ ವಿವಿಧೋದ್ದೇಶ ಸೇವಾ ಸಂಸ್ಥೆ, ಸಹಕಾರ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಸಂಸ್ಥೆಯ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜು.22ರಂದು ಬೆಳಿಗ್ಗೆ ಕಲಾಮಂದಿರದಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದಾರೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ತುಂಬಲ ರಾಮಣ್ಣ ತಿಳಿಸಿದರು. ಸಹಕಾರ ಸಂಘದ ಸದಸ್ಯತ್ವ ಅಭಿಯಾನಕ್ಕೆ ಸಂಸದ ಆರ್.ಧ್ರುವನಾರಾಯಣ್, ಅಂತರ್ಜಾಲಕ್ಕೆ ಶಾಸಕ ಸತೀಶ್ ಜಾರಕಿಹೊಳಿ ಚಲನೆ ನೀಡುವರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಅಧ್ಯಕ್ಷತೆ ವಹಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಪ್ರತಿಭಾ…