ಮೈಸೂರು: ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ… ಮಕ್ಕಳ ಬದುಕಿಗೆ ಶಾಲೆಯೇ ಚೆಂದ… ಮಕ್ಕಳಿಗೆ ಬೇಡ ದುಡಿತದ ಬವಣೆ, ಶಿಕ್ಷಣ ಕೊಡುವುದು ನಮ್ಮೆಲ್ಲರ ಹೊಣೆ… ಅಕ್ಕರೆ ತುಂಬಿದ ಶಿಕ್ಷಣವು ಎಲ್ಲಾ ಮಕ್ಕಳಿಗೆ ಸಿಗಲಿ… ಹೀಗೆ, ಮಕ್ಕಳ ಹಕ್ಕುಗಳ ಸಂರಕ್ಷಣೆ ಅರಿವು ಹಾಗೂ ಮಕ್ಕಳ ಸಾಗಾಣಿಕೆ ವಿರುದ್ಧ ಜಾಗೃತಿಗಾಗಿ ನೂರಾರು ಶಾಲಾ ಮಕ್ಕಳು ಹತ್ತುಹಲವು ಮಕ್ಕಳಪರವಾದ ಘೋಷಣೆಗಳನ್ನು ಮೊಳಗಿಸಿದರು. ಡಾನ್ ಬಾಸ್ಕೋ ಮಕ್ಕಳಾಲಯ, ಬೆಂಗಳೂರಿನ ಒಯಾಸಿಸ್ ಸಂಸ್ಥೆ ಜಂಟಿ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಾಥಾದಲ್ಲಿ ಎನ್‍ಆರ್ ಮೊಹಲ್ಲಾದ ಗುಡ್ ಶಫರ್ಡ್…
ಮಾದಕ ವ್ಯಸನಗಳ ವಿರುದ್ಧ ಜಾಗೃತಿ ಅಗತ್ಯ
July 29, 2018ಚಾಮರಾಜನಗರ: ‘ಆಧುನಿಕ ಸಮಾಜದಲ್ಲಿ ವಿದ್ಯಾವಂತ ಯುವ ಜನರೇ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿದ್ದು, ಇದರ ಪರಿಹಾರಕ್ಕೆ ಜಾಗೃತಿ ಮೂಡಿಸಬೇಕಾದ ಅವಶ್ಯಕತೆಯಿದೆ’ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಜಿ.ಬಸವರಾಜ ಹೇಳಿದರು. ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಇತರೆ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ಔಷಧ ವಿಪತ್ತು ನಿರ್ಮೂ ಲನೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿ ದಾಗ 16ರಿಂದ 22ರ ವಯೋಮಿತಿಯ ಯುವ ಜನರು ವಿದ್ಯಾರ್ಥಿಗಳು…
ಇಂದಿನಿಂದ ಕ್ಷಯರೋಗ ಪತ್ತೆ, ಚಿಕಿತ್ಸಾ ಆಂದೋಲನ
July 2, 2018ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜು.2ರಿಂದ 13ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಕ್ಷಯ ರೋಗವು ಮೈಕೋ ಬ್ಯಾಕ್ಟೀರಿಯಾದಿಂದ ಹರಡುವ ಒಂದು ಸಾಂಕ್ರಾಮಿಕ ರೋಗ. ಇದು ಸೋಂಕುಳ್ಳ ವ್ಯಕ್ತಿ ಸೀನಿದಾಗ ಮತ್ತು ಕೆಮ್ಮಿದಾಗ ಗಾಳಿಯ ಮೂಲಕ ಹರಡುತ್ತದೆ. ಚಿಕಿತ್ಸೆ ಪಡೆಯದ ವ್ಯಕ್ತಿ ಒಂದು ವರ್ಷದಲ್ಲಿ 10 ಅಥವಾ ಹೆಚ್ಚು ಜನರಿಗೆ ಸೋಂಕು ಹರಡಬಲ್ಲ. ಆದ್ದರಿಂದ ಈ ರೋಗದ ಬಗ್ಗೆ ಎಚ್ಚರಿಕೆ ಅಗತ್ಯ ಎಂದು ಇಲಾಖೆ ಅಧಿಕಾರಿಗಳು…
ಮಾದಕವಸ್ತು ಸೇವನೆಯಿಂದ ಸಂಸಾರಗಳು ನಾಶ
June 29, 2018ಹೊಳೆನರಸೀಪುರ: ‘ಕುಡಿತ, ಧೂಮಪಾನ, ಮಾದಕ ವಸ್ತುಗಳನ್ನು ಸೇವನೆ ಮಾಡುವುದರಿಂದ ಸಂಸಾರಗಳು ನಾಶವಾಗು ತ್ತದೆ’ ಎಂದು ಪಿಎಸ್‍ಐ ನಾಗಮ್ಮ ಹೇಳಿದರು. ತಾಲೂಕಿನ ದೊಡ್ಡಕಾಡನೂರು ಗ್ರಾಮದ ಜೆಎಸ್‍ಎಸ್ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ನಡೆದ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಮಾದಕ ವಸ್ತುಗಳ ಬಗ್ಗೆ ಅರಿವು ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು. ಮಾದಕ ವಸ್ತುಗಳ ಸೇವನೆಯಿಂದ ಕ್ಯಾನ್ಸರ್ ಸೇರಿದಂತೆ ಹಲವು ಭಯಾನಕ ರೋಗಗಳು ಬರುತ್ತವೆ. ದೇಶದಾದ್ಯಂತ ಸಾವಿರಾರು ಜನರು ಮಾದಕ ವಸ್ತುಗಳನ್ನು ಸೇವಿಸಿ ಸಾವನ್ನಪ್ಪುತ್ತಿದ್ದಾರೆ. ಇದರಿಂದ ಅವರ ಕುಟುಂಬಗಳು…
ಮಾದಕ ವಸ್ತುಗಳ ಸೇವನೆ ಪರಿಣಾಮದ ಬಗ್ಗೆ ಜಾಗೃತಿ
June 27, 2018ಮೈಸೂರು: ಮಾದಕ ವಸ್ತುಗಳ ಸೇವನೆಯಿಂದ ದೂರವಿರಿ… ಆರೋಗ್ಯ ಕಾಪಾಡಿಕೊಳ್ಳಿ… ಎಂಬುದು ಸೇರಿದಂತೆ ಮಾದಕ ವಸ್ತುಗಳ ಮುಕ್ತ ಸಮಾಜಕ್ಕೆ ಅಗತ್ಯವಾದ ಹತ್ತು ಹಲವು ಘೋಷ ವಾಕ್ಯಗಳನ್ನು ಒಳಗೊಂಡ ಫಲಕಗಳು ವ್ಯಸನ ಮುಕ್ತರಾಗಿ ಎಂಬ ಸಂದೇಶ ರವಾನಿಸಿದವು. ದೇವರಾಜ ಪೊಲೀಸ್ ಠಾಣೆ ವತಿಯಿಂದ ಅಂತಾರಾಷ್ಟ್ರೀಯ ಮಾದಕ ಪದಾರ್ಥ ಸೇವನೆ ಮತ್ತು ಅಕ್ರಮ ಸಾಗಾಣೆ ವಿರೋಧಿ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡು ಈ ರೀತಿಯ ಸಂದೇಶಗಳ ಫಲಕಗಳನ್ನಿಡಿದು ಜಾಗೃತಿ ಮೂಡಿಸಿದರು. ಅವಿಲಾ ಕಾನ್ವೆಂಟ್ ಶಾಲಾ ಆವರಣದಿಂದ…