ಬೆಂಗಳೂರು: ಬುದ್ಧಿಮಾಂದ್ಯ ರೋಗಿಗಳಿಗೂ ನೂತನ ಆಯುಷ್ಮಾನ್ ಭಾರತ ಯೋಜನೆಯಡಿ ಔಷಧೋಪಚಾರ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಇಂದಿಲ್ಲಿ ತಿಳಿಸಿದರು. ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಈ ತಿಂಗಳ 25ರಿಂದ ಕೇಂದ್ರ ಸರ್ಕಾರ ಪ್ರಾಯೋಜಿತ ‘ಆಯುಷ್ಮಾನ್ ಭಾರತ’ ಯೋಜನೆ ಪ್ರಾರಂಭವಾಗಲಿದೆ. ಯೋಜನಾ ವ್ಯಾಪ್ತಿಗೆ ಬುದ್ಧಿಮಾಂದ್ಯ ರೋಗಿಗಳ ಸೇರ್ಪಡೆಗೆ ಗಂಭೀರ ಚಿಂತನೆ ನಡೆದಿದೆ ಎಂದರು. ಇದರಿಂದ ಚಿಕಿತ್ಸೆಗೆ ತಗಲುವ ವೆಚ್ಚ, ಔಷಧಿ ವೆಚ್ಚವನ್ನೂ ಕೇಂದ್ರವೇ ಭರಸಲಿದೆ. ಯೋಜನೆ ವ್ಯಾಪ್ತಿಗೆ ವಿವಿಧ ಕ್ಷೇತ್ರಗಳ ಪರಿಣಿತರು ಅವರ ಕುಟುಂಬದ…
ಮೈಸೂರು
ಆಯುಷ್ಮಾನ್ ಭಾರತ ಸಂಬಂಧ ಸಚಿವ ಸಂಪುಟದಲ್ಲಿ ನಿರ್ಧಾರ
September 6, 2018ಬೆಂಗಳೂರು: ಕೇಂದ್ರ ಸರ್ಕಾರ ಪ್ರಕಟಿಸಿರುವ ‘ಆಯುಷ್ಮಾನ್ ಭಾರತ ‘ ಕಾರ್ಯ ಕ್ರಮ ಹಾಗೂ ರಾಜ್ಯ ಸರ್ಕಾರದ ‘ಆರೋಗ್ಯ ಕರ್ನಾಟಕ’ ಯೋಜನೆ ಯನ್ನು ವಿಲೀನಗೊಳಿಸುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ‘ಆಯುಷ್ಮಾನ್ ಭಾರತ’ ಯೋಜನೆಯ ಹಲವಾರು ಲೋಪದೋಷಗಳ ಬಗ್ಗೆ ರಾಜ್ಯ ಸರ್ಕಾರ ಕೋರಿದ ಮಾಹಿತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ರಾಜ್ಯ ಸರ್ಕಾರದ ವಿವಿಧ ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವೈದ್ಯಕೀಯ ಸಂಘಟನೆಗಳ ಮುಖ್ಯಸ್ಥರೊಂದಿಗೆ ಇಂದು ಚರ್ಚಿಸಿ ಅವರ…