ಬೆಂಗಳೂರು: ಬೆಂಗಳೂರು ನಗರವನ್ನು ಪ್ಲಾಸ್ಟಿಕ್ ಹಾಗೂ ತ್ಯಾಜ್ಯ ಮುಕ್ತ ಗೊಳಿಸಲು ಬಿ-ಪ್ಯಾಕ್ ತಂಡದ ಅಭಿಪ್ರಾಯ ವನ್ನು ನಿಗದಿತ ಕಾಲಾವಧಿಯೊಳಗೆ ಅನುಷ್ಠಾನಗೊಳಿ ಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ಬಿ-ಪ್ಯಾಕ್ ಕಚೇರಿಗೆ ಭೇಟಿ ನೀಡಿದ ಅವರು, ಬೆಂಗಳೂರು ನಗರಾಭಿವೃದ್ಧಿ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಜೊತೆ ಚರ್ಚಿಸಿ, ವಿವಿಧ ಸಂಸ್ಥೆಗಳ ಸಭೆ ಕರೆದು, ಅವಶ್ಯವಿರುವ ಎಲ್ಲಾ ಯೋಜನೆಗಳನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು. ಬೆಂಗಳೂರು ಅಭಿವೃದ್ಧಿಗೆ…