Tag: BS Yeddyurappa

ಬಿಜೆಪಿ ವರಿಷ್ಠರಿಂದಲೇ ದೋಸ್ತಿ ಸರ್ಕಾರ ಪತನಕ್ಕೆ ಮುಹೂರ್ತ
ಮೈಸೂರು

ಬಿಜೆಪಿ ವರಿಷ್ಠರಿಂದಲೇ ದೋಸ್ತಿ ಸರ್ಕಾರ ಪತನಕ್ಕೆ ಮುಹೂರ್ತ

January 10, 2019

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ರಾಜ್ಯ ಮುಂಗಡ ಪತ್ರ ಮಂಡಿಸುವ ಮುನ್ನವೇ ಪತನ ಗೊಳಿಸಲು ಬಿಜೆಪಿ ವರಿಷ್ಠರೇ ಮುಂದಾಗಿದ್ದಾರೆ. ಕುಮಾರಸ್ವಾಮಿ 2019-20ನೇ ಸಾಲಿನ ಮುಂಗಡ ಪತ್ರವನ್ನು 2019ರ ಫೆ.8ರಂದು ಮಂಡಿಸಲಿದ್ದಾರೆ. ಅದಕ್ಕೂ ಮುನ್ನವೇ ಮೈತ್ರಿ ಸರ್ಕಾರವನ್ನು ಪತನಗೊಳಿಸಿ, ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ ನಡೆಸಿದೆ. ಬಿಜೆಪಿಯ ರಾಜ್ಯ ನಾಯಕರು ಆಪರೇಷನ್ ಕಮಲದ ಮೂಲಕ ಸರ್ಕಾರ ರಚನೆಗೆ ನಡೆಸಿದ ಯತ್ನ ವಿಫಲ ಗೊಂಡಿರುವುದರಿಂದ ರಾಷ್ಟ್ರೀಯ ನಾಯಕರೇ ಕೈ ಹಾಕಿದ್ದಾರೆ. ಇದೇ ಕಾರಣಕ್ಕಾಗಿ ಬಿಜೆಪಿ…

ಡಿ ನೋಟಿಫಿಕೇಷನ್ ಪ್ರಕರಣ: ಯಡಿಯೂರಪ್ಪ ವಿರುದ್ಧದ 5 ಪ್ರಕರಣಗಳ ವಜಾಗೊಳಿಸಿದ ಸುಪ್ರೀಂಕೋರ್ಟ್
ಮೈಸೂರು

ಡಿ ನೋಟಿಫಿಕೇಷನ್ ಪ್ರಕರಣ: ಯಡಿಯೂರಪ್ಪ ವಿರುದ್ಧದ 5 ಪ್ರಕರಣಗಳ ವಜಾಗೊಳಿಸಿದ ಸುಪ್ರೀಂಕೋರ್ಟ್

December 5, 2018

ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಬಿಗ್ ರಿಲೀಫ್ ನೀಡಿದೆ. ಅಕ್ರಮ ಭೂಕಬಳಿಕೆ, ಡಿ ನೋಟಿಫಿಕೇಷನ್ ಸಂಬಂಧಿ ಸಿದ ಐದು ಪ್ರಕರಣಗಳನ್ನು ಸರ್ವೋಚ್ಚ ನ್ಯಾಯಾಲಯ ಇಂದು ವಜಾಗೊಳಿಸಿದೆ. ಬಿಎಸ್‍ವೈ ಹಾಗೂ ಕುಟುಂಬದ ವಿರುದ್ಧ ಸಿರಾಜಿನ್ ಬಾಷಾ ಎಂಬ ವಕೀಲರು ದಾಖಲಿಸಿದ್ದ ಐದು ಪ್ರಕರಣಗಳ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಐದು ಕೇಸ್‍ಗಳನ್ನು ವಜಾಗೊಳಿಸಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅಕ್ರಮ ಡಿನೋಟಿಫಿಕೇಷನ್ ನಡೆಸಿದ್ದರೆಂದು ವಕೀಲ, ಸಾಮಾಜಿಕ ಕಾರ್ಯಕರ್ತ ಸಿರಾಜಿನ್ ಬಾಷಾ ಹೈಕೋರ್ಟ್‍ನಲ್ಲಿ…

ಡಿಕೆಶಿ ಮನೆಗೆ ಬಿಎಸ್‍ವೈ ಭೇಟಿ: ಕುತೂಹಲ ಮೂಡಿಸಿದ ನಾಯಕರ ಮಾತುಕತೆ
ಮೈಸೂರು

ಡಿಕೆಶಿ ಮನೆಗೆ ಬಿಎಸ್‍ವೈ ಭೇಟಿ: ಕುತೂಹಲ ಮೂಡಿಸಿದ ನಾಯಕರ ಮಾತುಕತೆ

November 29, 2018

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಪ್ರತಿಪಕ್ಷ ನಾಯಕ ಬಿಎಸ್‍ವೈ ಜಲಸಂಪನ್ಮೂಲ ಸಚಿವರೊಂ ದಿಗೆ ನಡೆಸಿದ ಮಾತುಕತೆಯ ವಿವರ ಬಹಿರಂಗವಾಗಿಲ್ಲ. ಆದರೆ ಡಿಕೆಶಿ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಶಿವಮೊಗ್ಗ ನೀರಾವರಿ ಯೋಜನೆಗಳು ಬಗ್ಗೆ ಮತ್ತು ಸಿಗಂದೂರು ಸೇತುವೆ ನಿರ್ಮಾಣದ ಬಗ್ಗೆ ಶಿವಕುಮಾರ್ ಜೊತೆ ಚರ್ಚೆ ಮಾಡಿದ್ದೇನೆ ಎಂದರು. ಡಿ ಕೆ ಶಿವಕುಮಾರ್ ಅವರು…

ಮೈತ್ರಿ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ
ಮೈಸೂರು

ಮೈತ್ರಿ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

November 22, 2018

ಬೆಂಗಳೂರು: ರೈತ ವಿರೋಧಿ ನೀತಿ ಅನುಸರಿಸುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆ ಕೊಡುವ ವರೆಗೂ ಹೋರಾಟ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಗುಡುಗಿದ್ದಾರೆ. ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಅವರು, ರೈತ ಮಹಿಳೆ ಬಗ್ಗೆ ಮುಖ್ಯಮಂತ್ರಿ ಕೆಟ್ಟ ಪದ ಗಳನ್ನು ಬಳಸಿದ್ದಾರೆ, ಬೆಳಗಾವಿ ಅಧಿವೇಶನ ಆರಂಭಕ್ಕೂ ಮುನ್ನ ಕುಮಾರಸ್ವಾಮಿ ರೈತರ ಕ್ಷಮೆ ಕೇಳಬೇಕು. ಇಲ್ಲವಾದರೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು. ಕಬ್ಬು ಬೆಳೆ ಗಾರರ ಸಮಸ್ಯೆ ಪರಿಹರಿಸಲು ನಿನ್ನೆಯಿಡೀ…

ರೈತ ಮಹಿಳೆ, ಹೋರಾಟಗಾರರನ್ನು ಅವಮಾನಿಸಿರುವುದು ಸಹಿಸಲಾಗಲ್ಲ
ಮೈಸೂರು

ರೈತ ಮಹಿಳೆ, ಹೋರಾಟಗಾರರನ್ನು ಅವಮಾನಿಸಿರುವುದು ಸಹಿಸಲಾಗಲ್ಲ

November 19, 2018

ಬೆಂಗಳೂರು: ರೈತ ಮಹಿಳೆ ಹಾಗೂ ರೈತ ಹೋರಾಟ ಗಾರರನ್ನು ಅವಮಾನಿಸಿರುವುದನ್ನು ಸಹಿಸಲಾಗಲ್ಲ ಎಂದು ಗುಡುಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಸಿಎಂ ಕುಮಾರಸ್ವಾಮಿ ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಇಂದು ಸಂಜೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, `ನಾಲ್ಕು ವರ್ಷ ಎಲ್ಲಿ ಮಲಗಿದ್ದೆ’? ಎಂದು ಮುಖ್ಯಮಂತ್ರಿಗಳು ರೈತ ಮಹಿಳೆಯನ್ನು ಕೇಳಿದ್ದಾರಲ್ಲಾ, ಅದರ ಅರ್ಥವೇನು? ಎಂದು ಪ್ರಶ್ನಿಸಿದರು. ಪ್ರತಿಭಟನೆ ಮಾಡಿದ ರೈತರನ್ನು ಗೂಂಡಾಗಳು, ದರೋಡೆಕೋರರು ಎಂದೆಲ್ಲಾ ಕರೆದಿದ್ದಾರೆ. ಇಂತಹ ಧಿಮಾಕಿನ ಮಾತುಗಳು ಬೇಡ ಎಂದು ಕಿಡಿಕಾರಿದರು. `ನನಗೆ…

ಹೆಚ್‍ಡಿಕೆಯಿಂದ ತೊಘಲಕ್ ದರ್ಬಾರ್: ಯಡಿಯೂರಪ್ಪ
ಮಂಡ್ಯ

ಹೆಚ್‍ಡಿಕೆಯಿಂದ ತೊಘಲಕ್ ದರ್ಬಾರ್: ಯಡಿಯೂರಪ್ಪ

October 27, 2018

ಮಳವಳ್ಳಿ: ರೈತರ ಸಾಲ ಮನ್ನಾ ಮಾಡುವುದಾಗಿ 5 ತಿಂಗಳಿನಿಂದ ಬೊಬ್ಬೆ ಹೊಡೆಯುತ್ತಾ ಕಾಲಹರಣ ಮಾಡುತ್ತಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ತೊಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು. ಪಟ್ಟಣದ ಕನಕದಾಸ ಕ್ರೀಡಾಂಗಣ ದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕುಮಾರಸ್ವಾಮಿ ಅವರು ಸಾಲಮನ್ನಾ ವಿಚಾರದಲ್ಲಿ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ. ಜೊತೆಗೆ, ಯಡಿಯೂರಪ್ಪ ಒಂದು ಸಮು ದಾಯದ ಓಲೈಕೆ…

ಬಿಜೆಪಿ ಅಭ್ಯರ್ಥಿ ಪರ ಬಿಎಸ್‍ವೈ ಭರ್ಜರಿ ಪ್ರಚಾರ
ಮಂಡ್ಯ

ಬಿಜೆಪಿ ಅಭ್ಯರ್ಥಿ ಪರ ಬಿಎಸ್‍ವೈ ಭರ್ಜರಿ ಪ್ರಚಾರ

October 24, 2018

ಮಂಡ್ಯ: ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಾಯಕರು ಮಂಗಳವಾರ ಮಂಡ್ಯ ಲೋಕಸಭಾ ಕ್ಷೇತ್ರದ ವಿವಿಧೆಡೆ ಭರ್ಜರಿ ಪ್ರಚಾರ ನಡೆಸಿದರು. ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್. ಪೇಟೆ ಮತ್ತು ಕೆ.ಆರ್.ನಗರ ಸೇರಿದಂತೆ ವಿವಿಧೆಡೆಗಳಲ್ಲಿ ಬಿ.ಎಸ್.ಯಡಿಯೂರಪ್ಪ, ಶಾಸಕರಾದ ಆರ್.ಅಶೋಕ್, ಚಿತ್ರನಟಿ ತಾರಾ ಸೇರಿದಂತೆ ಹಲವು ನಾಯಕರು ಬಹಿರಂಗ ಪ್ರಚಾರ ನಡೆಸಿದರು. ಶ್ರಿರಂಗಪಟ್ಟಣ: ಜನ್ಮಭೂಮಿ ಮಂಡ್ಯಜಿಲ್ಲೆ, ಕರ್ಮಭೂಮಿ ಶಿವಮೊಗ್ಗ. ಆದರೆ, ಈ ನನ್ನ ಜನ್ಮಭೂಮಿ ಮಂಡ್ಯದಿಂದ ಒಬ್ಬನೇ ಒಬ್ಬ ಬಿಜೆಪಿಯ ಅಭ್ಯರ್ಥಿಯನ್ನು…

ದಂಗೆ ಏಳುವಂತೆ ಕರೆ ಕೊಡುತ್ತೇನೆ
ಮೈಸೂರು

ದಂಗೆ ಏಳುವಂತೆ ಕರೆ ಕೊಡುತ್ತೇನೆ

September 21, 2018

ಹಾಸನ/ಬೆಂಗಳೂರು: ‘ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆ ಕೊಟ್ಟರೆ ನಾನು ಸುಮ್ಮನಿರುವುದಿಲ್ಲ. ಬಿಜೆಪಿ ವಿರುದ್ಧ ದಂಗೆ ಏಳುವಂತೆ ರಾಜ್ಯದ ಜನರಿಗೆ ಕರೆ ಕೊಡುತ್ತೇನೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು. ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಉದಯಪುರದಲ್ಲಿ ಗುರುವಾರ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು. ಯಡಿಯೂರಪ್ಪ ಅವರಿಗೆ ಬುದ್ಧಿ ಭ್ರಮಣೆಯಾಗಿದೆ. ಅವರು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮುಂದು ವರೆಸಿದ್ದಾರೆ. ಪ್ರತಿನಿತ್ಯ ಪ್ರತಿಪಕ್ಷದವರ ಕಾಟ ಸಹಿಸಿಕೊಳ್ಳಬೇಕೋ…

ನೀವು ಏನು ಮಾಡುತ್ತೀರೋ ಮಾಡಿ, ಪ್ರತಿಯಾಗಿ ನಮಗೂ ಗೊತ್ತಿದೆ
ಮೈಸೂರು

ನೀವು ಏನು ಮಾಡುತ್ತೀರೋ ಮಾಡಿ, ಪ್ರತಿಯಾಗಿ ನಮಗೂ ಗೊತ್ತಿದೆ

September 21, 2018

ಬೆಂಗಳೂರು: ರಾಜ್ಯದಲ್ಲಿ ನಿಮ್ಮ(ಕುಮಾರ ಸ್ವಾಮಿ) ಸರ್ಕಾರವಿದ್ದರೆ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಸರ್ಕಾರವಿದೆ. ನೀವು ಏನು ಮಾಡುತ್ತೀರೋ ಮಾಡಿ, ಅದಕ್ಕೆ ಪ್ರತಿಯಾಗಿ ಮಾಡಲು ನಮಗೂ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಸವಾಲೆಸೆದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಂದು ಬೆಳಿಗ್ಗೆ ಭೇಟಿಯಾದ ನಂತರ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರುತಮ್ಮ ವಿರುದ್ಧ ಹರಿಹಾಯ್ದದ್ದಕ್ಕೆ ಯಡಿಯೂರಪ್ಪ ತಕ್ಕ ಪ್ರತ್ಯುತ್ತರ ನೀಡಿದರು. ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿ, ರಾಷ್ಟ್ರೀಯ ಪಕ್ಷದ ಅಧ್ಯಕ್ಷನಾಗಿ…

ಬಿಜೆಪಿ ಮುಖಂಡರೊಂದಿಗೆ ಬಿಎಸ್‍ವೈ ಗಹನ ಚರ್ಚೆ
ಮೈಸೂರು

ಬಿಜೆಪಿ ಮುಖಂಡರೊಂದಿಗೆ ಬಿಎಸ್‍ವೈ ಗಹನ ಚರ್ಚೆ

September 12, 2018

ಬೆಂಗಳೂರು: ಆಡಳಿತ ಪಕ್ಷದಲ್ಲಿನ ಆಂತರಿಕ ಕಚ್ಚಾಟವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ಪಕ್ಷದ ಪ್ರಮುಖ ನಾಯಕ ರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು. ಡಾಲರ್ಸ್ ಕಾಲನಿಯ ತಮ್ಮ ಧವಳಗಿರಿ ನಿವಾಸದಲ್ಲಿ ಬಹು ಸಮಯದವರೆಗೆ ಗೌಪ್ಯ ಸಭೆ ಮಾಡಿ, ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು. ಕಾಂಗ್ರೆಸ್-ಜೆಡಿಎಸ್‍ನಿಂದ ಬೇಸರಗೊಂಡು ತಮ್ಮ ಜೊತೆ ಕೈಜೋಡಿ ಸಲು ಶಾಸಕರು ಮುಂದಾಗಿರುವುದು, ಇದೇ ಸಂದರ್ಭದಲ್ಲಿ ವರಿಷ್ಠರು ನೀಡಿರುವ ಸಲಹೆಗಳನ್ನು ನಾಯಕರ ಗಮನಕ್ಕೆ ತಂದಿದ್ದಾರೆ. ಮೈತ್ರಿ ಸರ್ಕಾರ ಉರುಳಿಸಿ, ಬಿಜೆಪಿ ಸರ್ಕಾರ…

1 2 3 4 6
Translate »