Tag: BS Yeddyurappa

ಡಿಕೆಶಿ ಕುಟುಂಬದ ಭ್ರಷ್ಟಾಚಾರ ತನಿಖೆ ನಡೆಸುವಂತೆ ಇಡಿಗೆ ಬಿಎಸ್‍ವೈ ಪತ್ರ
ಮೈಸೂರು

ಡಿಕೆಶಿ ಕುಟುಂಬದ ಭ್ರಷ್ಟಾಚಾರ ತನಿಖೆ ನಡೆಸುವಂತೆ ಇಡಿಗೆ ಬಿಎಸ್‍ವೈ ಪತ್ರ

September 9, 2018

ಬೆಂಗಳೂರು:  ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಕುಟುಂಬ ನಡೆಸಿರುವ ಭ್ರಷ್ಟಾಚಾರ ಕುರಿತು ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬರೆದಿದ್ದಾರೆ ಎನ್ನಲಾದ ಪತ್ರ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಉಂಟು ಮಾಡಿದೆ. ಶಿವಕುಮಾರ್ ಅಷ್ಟೇ ಅಲ್ಲದೆ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸಚಿವ ಕೆ.ಜೆ. ಜಾರ್ಜ್, ಆರ್.ವಿ. ದೇಶಪಾಂಡೆ, ಶಾಸಕರಾದ ಎಂ.ಬಿ. ಪಾಟೀಲ್ ಹಾಗೂ ಗೋವಿಂದರಾಜ್ ವಿರುದ್ಧ ಕೇಂದ್ರದ ತನಿಖಾ ಸಂಸ್ಥೆಗಳು ತನಿಖೆ ನಡೆಸಿ ಮೈತ್ರಿ ಸರ್ಕಾರ ಉರುಳಿಸಲು…

ಪ್ರವಾಹ ಪೀಡಿತ ಪ್ರದೇಶಗಳಿಗೆ ವಿಪಕ್ಷ ನಾಯಕ ಯಡಿಯೂರಪ್ಪ ಭೇಟಿ
ಕೊಡಗು, ಮೈಸೂರು

ಪ್ರವಾಹ ಪೀಡಿತ ಪ್ರದೇಶಗಳಿಗೆ ವಿಪಕ್ಷ ನಾಯಕ ಯಡಿಯೂರಪ್ಪ ಭೇಟಿ

August 20, 2018

ಕುಶಾಲನಗರ: ನೆರೆಪ್ರವಾಹದಿಂದ ಮುಳು ಗಡೆಯಾಗಿರುವ ವಸತಿ ಪ್ರದೇಶಗಳಿಗೆ ಭಾನುವಾರ ವಿರೋಧ ಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಪಟ್ಟಣದ ಸಾಯಿ ಬಡಾವಣೆ, ಕುವೆಂಪು ಬಡಾವಣೆ ಗಳಿಗೆ ಅಧಿಕಾರಿಗಳು ಹಾಗೂ ಪಕ್ಷದ ಇತರೆ ನಾಯಕ ರೊಂದಿಗೆ ಭೇಟಿ ನೀಡಿದ್ದ ಯಡಿಯೂರಪ್ಪ, ನೆರೆಪ್ರವಾಹ ದಿಂದ ಉಂಟಾಗಿರುವ ಅಪಾರ ಆಸ್ತಿಪಾಸ್ತಿ ಹಾನಿ ಬಗ್ಗೆ, ಪರಿಹಾರ ಕ್ರಮಗಳು, ಸಂತ್ರಸ್ತರ ಆಶ್ರಯ ವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ಕೊಡವ ಸಮಾಜ ಹಾಗೂ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ…

ಕೊಡಗಿನ ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕು: ಸರ್ಕಾರಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಆಗ್ರಹ
ಕೊಡಗು, ಮೈಸೂರು

ಕೊಡಗಿನ ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕು: ಸರ್ಕಾರಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಆಗ್ರಹ

August 20, 2018

ಮಡಿಕೇರಿ: ಅತಿವೃಷ್ಟಿಯಿಂದ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಅಪಾರ ಹಾನಿ ಸಂಭವಿಸಿದ್ದರೂ ರಾಜ್ಯ ಸರ್ಕಾರ ಪರಿಹಾರ ಕಾರ್ಯಗಳನ್ನು ನಡೆಸುವಲ್ಲಿ ಮಂದಗತಿಯ ಧೋರಣೆಯನ್ನು ಅನುಸರಿ ಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಮಳೆಯ ಪ್ರಮಾಣ ಇಳಿಮುಖಗೊಂಡ ಬಳಿಕ ಸಂತ್ರಸ್ತರ ಬದುಕನ್ನು ಹಸನುಗೊಳಿ ಸುವ ಶಾಶ್ವತ ಪರಿಹಾರ ಕಾರ್ಯಗಳಿಗೆ ಸರಕಾರ ಮುಂದಾಗಬೇಕೆಂದು ಅವರು ಆಗ್ರಹಿಸಿದ್ದಾರೆ. ಅತಿವೃಷ್ಟಿ ಪೀಡಿತ ಸುಂಟಿ ಕೊಪ್ಪ ವಿಭಾಗಗಳಿಗೆ ಭೇಟಿ ನೀಡಿ ಮಡಿಕೇರಿಗೆ ಆಗಮಿಸಿದ ಯಡಿಯೂರಪ್ಪ ಅವರು, ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಗಳಿಂದ ಮಳೆಹಾನಿಯ ಬಗ್ಗೆ…

ಕೇಂದ್ರದಿಂದ 100 ಕೋಟಿ ಬಿಡುಗಡೆ, ಇನ್ನಷ್ಟು ಅನುದಾನಕ್ಕೆ ಪ್ರಯತ್ನ ಮಾಜಿ ಸಿಎಂ ಯಡಿಯೂರಪ್ಪ
ಮೈಸೂರು

ಕೇಂದ್ರದಿಂದ 100 ಕೋಟಿ ಬಿಡುಗಡೆ, ಇನ್ನಷ್ಟು ಅನುದಾನಕ್ಕೆ ಪ್ರಯತ್ನ ಮಾಜಿ ಸಿಎಂ ಯಡಿಯೂರಪ್ಪ

August 20, 2018

ಮೈಸೂರು:  ಮಳೆಯಿಂದಾಗಿ ರುವ ಹಾನಿ ಪ್ರದೇಶಗಳ ನೆರವಿಗೆ ಕೇಂದ್ರ ಸರ್ಕಾರ 100 ಕೋಟಿ ರೂ. ಬಿಡುಗಡೆ ಮಾಡಿದ್ದು, ಇನ್ನಷ್ಟು ಅನು ದಾನ ಬಿಡುಗಡೆ ಮಾಡುವಂತೆ ತಾವು ಪ್ರದಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಡಗು ಹಾಗೂ ಇತರೆ ಜಿಲ್ಲೆಗಳಲ್ಲಿ ಮಳೆಯಿಂದಾಗಿರುವ ಹಾನಿ ಪ್ರದೇಶಗಳ ನೆರವಿಗೆ ಕೇಂದ್ರ ಸರ್ಕಾರ ಇನ್ನಷ್ಟು ಅನುದಾನ ಬಿಡುಗಡೆ ಮಾಡುವಂತೆ ಶಿಫಾರಸು ಮಾಡುವುದಾಗಿ ತಿಳಿಸಿದರು. ಮಳೆ ಸಂತ್ರಸ್ಥರಿಗೆ…

ಅಧಿಕಾರಿಗಳ ವರ್ಗಾವಣೆಯಲ್ಲಿ ನನ್ನ ಹಸ್ತಕ್ಷೇಪವಿಲ್ಲ
ಹಾಸನ

ಅಧಿಕಾರಿಗಳ ವರ್ಗಾವಣೆಯಲ್ಲಿ ನನ್ನ ಹಸ್ತಕ್ಷೇಪವಿಲ್ಲ

August 7, 2018

ಹಾಸನ: ವಿವಿಧ ಇಲಾಖೆ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆಂಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ನಾನು ಯಾವುದೇ ಇಲಾಖೆ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಯಾವುದೇ ರೀತಿಯಲ್ಲೂ ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕಾರಿಣಿ ಸಭೆಯ ವೊಂದರಲ್ಲಿ ಯಡಿಯೂರಪ್ಪ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದರು. ಯಾವ ಸಚಿವರ ಬಳಿಯೂ ವರ್ಗಾವಣೆ ವಿಚಾರದಲ್ಲಿ ಚರ್ಚಿಸಿಲ್ಲ. ನನ್ನ ವೈಯಕ್ತಿಕ ಕೆಲಸಗಳನ್ನು ಯಾರಿಂದಲೂ ಮಾಡಿಸಿಕೊಂಡಿಲ್ಲ. ನನ್ನ ಇಲಾಖೆಯಲ್ಲಿ ನಡೆದಿರುವ ವರ್ಗಾವಣೆ ದಾಖಲೆಗಳನ್ನು…

ರಾಜಕೀಯ ಲಾಭಕ್ಕಾಗಿ ಸಮಾಜ ಒಡೆಯುವ ಪ್ರಯತ್ನ ವಿಫಲವಾಗಿದೆ ಬಸವ ಜಯಂತಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ
ಮೈಸೂರು

ರಾಜಕೀಯ ಲಾಭಕ್ಕಾಗಿ ಸಮಾಜ ಒಡೆಯುವ ಪ್ರಯತ್ನ ವಿಫಲವಾಗಿದೆ ಬಸವ ಜಯಂತಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ

August 6, 2018

ಮೈಸೂರು: ರಾಜಕೀಯ ಲಾಭಕ್ಕಾಗಿ ನಮ್ಮ ಸಮಾಜವನ್ನು ವೀರಶೈವ ಮತ್ತು ಲಿಂಗಾಯತ ಎಂದು ಪ್ರತ್ಯೇಕಗೊಳಿಸಿ ಒಡೆಯುವ ಪ್ರಯತ್ನ ಸದ್ಯ ವಿಫಲವಾಗಿದ್ದು, ಇನ್ನಾದರೂ ನಮ್ಮ ಸಮುದಾಯ ಇಂತಹ ರಾಜಕೀಯ ಕುತಂತ್ರಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಮಠದ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯತ ಸಂಘ-ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಬಸವ ಜಯಂತಿ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯದ…

ಕನ್ನಡ ಚಳುವಳಿಗಾರರ ಸಂಘದಿಂದ ಅಣಕು ಪ್ರತಿಭಟನೆ
ಮೈಸೂರು

ಕನ್ನಡ ಚಳುವಳಿಗಾರರ ಸಂಘದಿಂದ ಅಣಕು ಪ್ರತಿಭಟನೆ

August 3, 2018

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಬೆಂಬಲಿಗರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಖಂಡಿಸಿ, ಮೈಸೂರು ಜಿಲ್ಲಾ ಕನ್ನಡ ಚಳುವಳಿಗಾರರ ಸಂಘದ ಕಾರ್ಯಕರ್ತರು ಗುರುವಾರ ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದರು. ಬಿ.ಎಸ್.ಯಡಿಯೂರಪ್ಪ ಮತ್ತು ಬೆಂಬಲಿಗರು ತಮ್ಮ ಸ್ವಾರ್ಥ ಸಾಧನೆಗಾಗಿ ಅಮಾಯಕ ಉತ್ತರ ಕರ್ನಾಟಕದ ಜನರನ್ನು ಎತ್ತಿಕಟ್ಟಿ ಪ್ರತ್ಯೇಕ ರಾಜ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಪ್ರತಿ ಭಟನಾಕಾರರು ಖಂಡಿಸಿದರು….

ಸುವರ್ಣಸೌಧ ಎದುರು ಮಠಾಧೀಶರ ಧರಣಿ
ಮೈಸೂರು

ಸುವರ್ಣಸೌಧ ಎದುರು ಮಠಾಧೀಶರ ಧರಣಿ

August 1, 2018

ಬೆಳಗಾವಿ: ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿ ಹಾಗೂ ಸುವರ್ಣಸೌಧಕ್ಕೆ ಕಚೇರಿಗಳ ಸ್ಥಳಾಂತರಕ್ಕೆ ಆಗ್ರಹಿಸಿ ಮಠಾಧೀಶರ ನೇತೃತ್ವದಲ್ಲಿ ಸುವರ್ಣಸೌಧದ ಎದುರು ಇಂದು ಧರಣಿ ನಡೆಯಿತು. ಧರಣಿ ವೇಳೆ ಕೆಲ ಕಿಡಿಗೇಡಿಗಳು ಪ್ರತ್ಯೇಕ ಧ್ವಜ ಹಾರಿಸುವುದರ ಜತೆಗೆ ಘೋಷಣೆ ಸಹ ಕೂಗಿದರು. ಪೊಲೀಸರು ಪ್ರತ್ಯೇಕ ಧ್ವಜ ವಶಪಡಿಸಿಕೊಂಡು, ಕಿಡಿಗೇಡಿಗಳನ್ನು ಬಂಧಿಸಿದರು. ಅಲ್ಲದೆ ವೇದಿಕೆ ಮೇಲೆ ಗೊಂದಲದ ವಾತಾವರಣ ನಿರ್ಮಾಣವಾಯಿತು. ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ನಮ್ಮ ಬೆಂಬಲ ಇಲ್ಲ. ಗದ್ದಲ ಎಬ್ಬಿಸಿದರೆ ವೇದಿಕೆಯಿಂದ ನಿರ್ಗಮಿಸುವುದಾಗಿ ಸ್ವಾಮೀಜಿಗಳು ಹೇಳುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತು….

ಕಾಂಗ್ರೆಸ್ ವೀರಶೈವ-ಲಿಂಗಾಯತರ ಒಡೆಯಲೆತ್ನಿಸಿದರೆ ಜೆಡಿಎಸ್ ರಾಜ್ಯವನ್ನೇ ಒಡೆಯಲು ಹೊರಟಿದೆ
ಮೈಸೂರು

ಕಾಂಗ್ರೆಸ್ ವೀರಶೈವ-ಲಿಂಗಾಯತರ ಒಡೆಯಲೆತ್ನಿಸಿದರೆ ಜೆಡಿಎಸ್ ರಾಜ್ಯವನ್ನೇ ಒಡೆಯಲು ಹೊರಟಿದೆ

July 31, 2018

ಬೆಂಗಳೂರು:  ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ವೀರಶೈವ-ಲಿಂಗಾಯತ ರನ್ನು ಒಡೆಯಲು ಪ್ರಯತ್ನಿಸಿದರೆ, ಜೆಡಿಎಸ್ ರಾಜ್ಯವನ್ನು ಒಡೆಯಲು ಹೊರಟಿದ್ದು, ಇದನ್ನು ರಾಜ್ಯದ ಜನತೆ ಒಪ್ಪುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಅವರು, ಅಖಂಡ ಕರ್ನಾಟಕ ನಿರ್ಮಾಣಕ್ಕೆ ಹಿರಿಯರೆಲ್ಲ ಸೇರಿ ರಕ್ತ ಹರಿಸಿದ್ದಾರೆ. ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಇತ್ತೀಚಿನ ಹೇಳಿಕೆಗಳನ್ನು ಗಮನಿಸಿದರೆ ಏಕೀಕೃತ ಕರ್ನಾಟಕ ಒಡೆಯಲು ಷಡ್ಯಂತರ ನಡೆಸಿ ದಂತಿದೆ ಎಂದಿದ್ದಾರೆ. ರಾಜ್ಯದ ಜನತೆ 104 ಶಾಸಕರನ್ನು…

ರಾಜ್ಯದಲ್ಲಿ 20ರಿಂದ 23 ಲೋಕಸಭಾ  ಸ್ಥಾನ ಗೆಲ್ಲಲು ಬಿಜೆಪಿ ಪಣ
ಮೈಸೂರು

ರಾಜ್ಯದಲ್ಲಿ 20ರಿಂದ 23 ಲೋಕಸಭಾ  ಸ್ಥಾನ ಗೆಲ್ಲಲು ಬಿಜೆಪಿ ಪಣ

July 29, 2018

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಲು ರಾಜ್ಯ ಬಿಜೆಪಿ ಇಂದಿನಿಂದಲೇ ಅಖಾಡಕ್ಕೆ ಇಳಿದಿದೆ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗುವುದನ್ನು ಖಚಿತಪಡಿಸಲು ರಾಜ್ಯದಿಂದ ಕನಿಷ್ಠ 20ರಿಂದ 23 ಸ್ಥಾನಗಳಲ್ಲಿ ಗೆಲ್ಲಲೇಬೇಕೆಂದು ಪಕ್ಷ ಪಣ ತೊಟ್ಟಿದೆ. ಗೆಲುವೇ ಮಾನದಂಡವಾಗಿ ಇಟ್ಟು ಕೊಂಡು ಚುನಾವಣಾ ಕಣಕ್ಕೆ ಇಳಿಯುವ ಸಂದರ್ಭದಲ್ಲಿ ಅಗತ್ಯ ಕಂಡು ಬಂದರೆ ಜೆಡಿಎಸ್ ಇಲ್ಲವೇ ಕಾಂಗ್ರೆಸ್‍ನ ಪ್ರಬಲ ವ್ಯಕ್ತಿಗಳನ್ನು ಸೆಳೆಯುವ ತೀರ್ಮಾನ ತೆಗೆದುಕೊಂಡಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣಾ ಅಭಿಯಾನ…

1 2 3 4 5 6
Translate »