ಕೊಳ್ಳೇಗಾಲ: ಚಾಮುಂಡೇಶ್ವರಿಯಲ್ಲಿ ಸೋಲುವ ಭೀತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿಗೆ ವಲಸೆ ಬಂದಿದ್ದಾರೆ. ನಾನು ಮೊಳಕಾಲ್ಮೂರು ಹಾಗೂ ಬಾದಾಮಿ ಎರಡು ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದು, ಎರಡು ಕ್ಷೇತ್ರದಲ್ಲೂ ಕಾರ್ಯಕರ್ತರು ಹಾಗೂ ಮತದಾರರ ಆಶೀರ್ವಾದದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಸಂಸದ ಹಾಗೂ ಮಾಜಿ ಸಚಿವ ಶ್ರೀರಾಮುಲು ಹೇಳಿದರು. ಅವರು ಹನೂರು ಕ್ಷೇತ್ರ ವ್ಯಾಪ್ತಿಯ ಪಾಳ್ಯ ಹಾಗೂ ಕೌದಳ್ಳಿ ಗ್ರಾಮದಲ್ಲಿ ಅಯೋಜಿಸಲಾಗಿದ್ದ ರೋಡ್ ಶೋನಲ್ಲಿ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿ ಡಾ.ಪ್ರೀತನ್ ನಾಗಪ್ಪ ಪರ ಮತಯಾಚಿಸಿ ಮಾತನಾಡಿ. ರಾಜ್ಯದಲ್ಲಿ 80 ಕ್ಷೇತ್ರಗಳಲ್ಲಿ ಈಗಾಗಲೇ ಪ್ರಚಾರ…
ಮೈಸೂರು
ಬಾದಾಮಿಯಲ್ಲೂ ಸಿಎಂ ಸಿದ್ದರಾಮಯ್ಯ ಸ್ಪರ್ಧೆ?
April 19, 2018ಮುನಿಸಿಕೊಂಡ ಸಿಎಂ ಜೊತೆ ಪರಮೇಶ್ವರ್, ವೇಣುಗೋಪಾಲ್ ಮಾತುಕತೆ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದ ಜೊತೆ ಬಾದಾಮಿ ಯಲ್ಲೂ ಸ್ಪರ್ಧಿಸುವ ಸಾಧ್ಯತೆಗಳು ನಿಚ್ಚಳವಾಗಿ ಕಂಡುಬರುತ್ತಿದೆ. ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಇಚ್ಛಿಸಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಅದನ್ನು ಒಪ್ಪದೇ ಚಾಮುಂಡೇಶ್ವರಿ ಯಲ್ಲಿ ಮಾತ್ರ ಸ್ಪರ್ಧಿಸುವಂತೆ ತಿಳಿಸಿದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಮುಖ್ಯಮಂತ್ರಿಗಳು ನವದೆಹಲಿಯಲ್ಲಿ ಕಾಂಗ್ರೆಸ್ ಪಟ್ಟಿ ಬಿಡುಗಡೆಗೂ ಮುನ್ನವೇ ಬೆಂಗಳೂರಿಗೆ ಆಗಮಿಸಿದ್ದರು. ಮರುದಿನವೇ ಮೈಸೂರಿಗೆ ಬಂದ ಮುಖ್ಯಮಂತ್ರಿಗಳು ಬೇರೆ ಯಾವುದರ ಬಗ್ಗೆಯೂ ತಲೆ ಕೆಡಿಸಿಕೊಳ್ಳದೇ ಕಳೆದ ಮೂರು…