ಸಾಮೂಹಿಕ ಪ್ರಾರ್ಥನೆ ಸಲ್ಲಿಕೆ ಪರಸ್ಪರ ಶುಭಾಶಯ ವಿನಿಮಯ ಕೊಡಗು ಸಂತ್ರಸ್ತರಿಗೆ ನೆರವಾಗಲು ಸಲಹೆ ಮಂಡ್ಯ: ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಬುಧ ವಾರ ಜಿಲ್ಲಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಿದರು. ಮಂಡ್ಯ, ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣ, ಕೆ.ಆರ್.ಪೇಟೆ, ನಾಗಮಂಗಲ, ಪಾಂಡವಪುರ ಸೇರಿದಂತೆ ವಿವಿಧೆಡೆ ಬಕ್ರೀದ್ ಆಚರಿಸಲಾಯಿತು. ಸಕ್ಕರೆ ನಾಡು ಮಂಡ್ಯದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿ ಎಲ್ಲರಿಗೂ ಶುಭ ಕೋರುತ್ತಿದ್ದ ದೃಶ್ಯ ಕಂಡು ಬಂತು. ಬೆಳಗಿನಿಂದಲೇ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಯಲ್ಲಿ…