ಮೈಸೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಈದ್-ಉಲ್-ಅeóÁ (ಬಕ್ರೀದ್) ಹಬ್ಬವನ್ನು ಮೈಸೂರಿನಲ್ಲಿ ಬುಧವಾರ ಮುಸ್ಲಿಂ ಬಾಂಧವರು ಭಕ್ತಿ ಭಾವದಿಂದ ಆಚರಿಸಿದರು. ಮೈಸೂರಿನ ತಿಲಕ್‍ನಗರ, ರಾಜೀವ್‍ನಗರ, ಗೌಸಿಯಾನಗರದ ಈದ್ಗಾ ಮೈದಾನ ಹಾಗೂ ವಿವಿಧ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪರಸ್ಪರ ಆಲಂಗಿಸಿ, ಶುಭಾಶಯ ವಿನಿಮಯ ಮಾಡಿಕೊಂಡರು. ತಿಲಕ್‍ನಗರದ ಹಳೇ ಈದ್ಗಾ ಮೈದಾನದಲ್ಲಿ ಸಹಸ್ರಾರು ಮುಸಿಂ್ಲ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮೈಸೂರಿನ ಸರ್ಖಾಜಿ ಹಜರತ್ ಮೌಲಾನಾ ಮೊಹಮ್ಮದ್ ಉಸ್ಮಾನ್ ಷರೀಫ್ ಮಾತನಾಡಿ, ತ್ಯಾಗ ಮತ್ತು ಬಲಿದಾನದ…
ಜಿಲ್ಲಾದ್ಯಂತ ಸಡಗರ, ಸಂಭ್ರಮದಿಂದ ಬಕ್ರೀದ್ ಆಚರಣೆ
August 23, 2018ಚಾಮರಾಜನಗರ/ಗುಂಡ್ಲುಪೇಟೆ: ತ್ಯಾಗ ಬಲಿದಾನ ಸಂಕೇತವಾದ ಬಕ್ರೀದ್ ಹಬ್ಬವನ್ನು ಜಿಲ್ಲಾದ್ಯಂತ ಮುಸ್ಲಿಂ ಬಾಂಧವರು ಸಡಗರ, ಸಂಭ್ರಮದಿಂದ ಆಚರಿಸಿದರು.ಬೆಳಿಗ್ಗೆಯೇ ಹೊಸ ಬಟ್ಟೆ ತೊಟ್ಟು, ಹಿರಿಯರು, ಕಿರಿಯರು ಎಂಬ ಬೇಧಭಾವ ಇಲ್ಲದೇ ಮಸೀದಿ, ಈದ್ಗಾ ಮೈದಾನಕ್ಕೆ ತೆರಳಿದ ಮುಸ್ಲಿಂರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ನಂತರ ಒಬ್ಬರಿಗೊಬ್ಬರು ಅಪ್ಪಿ ಕೊಳ್ಳುವ ಮೂಲಕ ಕೈ-ಕೈ ಕುಲುಕಿಕೊಳ್ಳುವ ಮೂಲಕ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೋಂಡರು. ಚಾಮರಾಜನಗರ: ಜಿಲ್ಲಾ ಕೇಂದ್ರವಾದ ಚಾಮರಾಜನಗರದಲ್ಲಿ ಸಹ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಅದ್ಧೂರಿ ಯಾಗಿ ಆಚರಿಸಿದರು. ನಗರದ ಕ್ರೀಡಾಂ ಗಣ…
ಜಿಲ್ಲೆಯೆಲ್ಲೆಡೆ ತ್ಯಾಗ-ಬಲಿದಾನದ ಬಕ್ರೀದ್ ಆಚರಣೆ
August 23, 2018ಹಾಸನ: ನಗರ ಸೇರಿದಂತೆ ಜಿಲ್ಲೆಯೆಲ್ಲೆಡೆ ಮುಸ್ಲಿಂ ಬಾಂಧವರು ತ್ಯಾಗ ಬಲಿದಾನ ಸಂಕೇತವಾದ ಬಕ್ರೀದ್ ಅನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಹಾಸನ ನಗರ: ನಗರದಲ್ಲಿ ಸಾಮೂಹಿಕ ಪ್ರಾರ್ಥನೆ, ಶುಭಾಶಯ ವಿನಿಮಯದ ಮೂಲಕ ಮುಸ್ಲಿಂ ಬಾಂಧವರು ಸಡಗರ ದಿಂದ ಬಕ್ರೀದ್ ಆಚರಿಸಿದರು. ಹಬ್ಬದ ಅಂಗವಾಗಿ ನಗರದ ಹೊಸಲೈನ್ ರಸ್ತೆ ಬಳಿ ಇರುವ ಈದ್ಗಾ ಮೈದಾನಕ್ಕೆ ಬಿಳಿವಸ್ತ್ರ ಧರಿಸಿ ಬೆಳಿಗ್ಗೆಯೇ ಆಗಮಿಸಿದ ಮುಸ್ಲಿಂ ಬಾಂಧವರು ಹಿರಿಯರು-ಕಿರಿಯರೆನ್ನದೆ, ಸಾಮೂಹಿಕವಾಗಿ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು….