ಬೆಂಗಳೂರು: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ರಾತ್ರಿ ಸಂಚಾರ ನಿರ್ಬಂಧವನ್ನು ಮುಂದುವರಿಸಲು ಕೇಂದ್ರ ಸರ್ಕಾರ ಮತ್ತೆ ಶಿಫಾರಸು ಮಾಡಿದ್ದು ಕೇರಳ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಪರಿಸರ ಮತ್ತು ಅರಣ್ಯ ಸಚಿವಾಲಯ ಜೊತೆಗೆ ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ಟು ಸಲ್ಲಿಸಿ ಬಂಡೀಪುರ ರಾಷ್ಟ್ರೀಯ ಹೆದ್ದಾರಿ-212ರಲ್ಲಿ ರಾತ್ರಿ ವೇಳೆ ಸಂಚಾರದ ನಿಷೇಧ ನಿರ್ಬಂಧದ ಯಥಾಸ್ಥಿತಿ ಕಾಯ್ದುಕೊಳ್ಳು ವಂತೆ ಕಾರ್ಯದರ್ಶಿಗಳ ಸಮಿತಿ ಮಾಡಿರುವ ಶಿಫಾರಸುಗಳನ್ನು ಒಪ್ಪಿಕೊಳ್ಳಲಾಗಿದೆ…