ಮೈಸೂರು: ಪದ್ಮಶ್ರೀ ಪುರಸ್ಕೃತ , ಹಿರಿಯ ವಿದ್ವಾಂಸ ಡಾ.ಬನ್ನಂಜೆ ಗೋವಿಂದಾಚಾರ್ಯ ಅವರಿಗೆ ಕಲಾಸಂದೇಶ ಪ್ರತಿಷ್ಠಾನದ ವತಿಯಿಂದ ‘ತತ್ವ ವಿದ್ಯಾನಿಧಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ನಾದಬ್ರಹ್ಮ ಸಂಗೀತ ಸಭಾಂಗಣದಲ್ಲಿ ಕಲಾಸಂದೇಶ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯ ದಲ್ಲಿ ಶನಿವಾರ ಆಯೋಜಿಸಿದ್ದ ‘ಕಲಾಭಿವರ್ಧನ-2020’ ಭಾರತೀಯ ಕಲೆಗಳ ಆರಾಧನಾ ಪರ್ವ ಮತ್ತು ಅಭಿ ನಂದನಾ ಸಮಾರಂಭದಲ್ಲಿ ಗ್ಲೋಬಲ್ ವಿಷ್ಣುಸಹಸ್ರ ನಾಮ ಸತ್ಸಂಗ್ ಫೆಡರೇಷನ್ ಸ್ಥಾಪಕ ಡಾ.ಅರಳು ಮಲ್ಲಿಗೆ ಪಾರ್ಥಸಾರಥಿ ಸನ್ಮಾನಿಸಿ, ಅಭಿನಂದಿಸಿದರು. ಅಭಿನಂದನೆ ಸ್ವೀಕರಿಸಿ…