ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಪ್ರವಾಸಿ ಸ್ಥಳ ಭರಚುಕ್ಕಿಯಲ್ಲಿ ಆಗಸ್ಟ್ 18 ಹಾಗೂ 19 ರಂದು ಜಲಪಾತೋತ್ಸವ ನಿಗದಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಇಂದು ಭರ ಚುಕ್ಕಿಗೆ ಭೇಟಿ ನೀಡಿ ಕೈಗೊಳ್ಳಬೇಕಾಗಿರುವ ಅಗತ್ಯ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು. ವೇದಿಕೆ ಕಾರ್ಯಕ್ರಮ ನಡೆಯುವ ಜಲಪಾತದ ಬಳಿಯ ಸ್ಥಳಕ್ಕೆ ಭೇಟಿ ಕೊಟ್ಟು ವೇದಿಕೆ ನಿರ್ಮಾಣ, ಗಣ್ಯರು, ಆಹ್ವಾನಿತರು, ವೀಕ್ಷಕರು ಕುಳಿತುಕೊಳ್ಳುವ ಆಸನಗಳ ವ್ಯವಸ್ಥೆ ಬಗ್ಗೆ ಕೈಗೊಳ್ಳಬೇಕಿರುವ ಸಿದ್ಧತೆ ಕುರಿತು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ…