ಬೇಲೂರು: ಎತ್ತಿನಹೊಳೆ, ಯಗಚಿ ಏತ ನೀರಾವರಿ, ರಣಘಟ್ಟ ಒಡ್ಡು ಯೋಜನೆಗಳ ಮೂಲಕ ತಾಲೂಕಿನಲ್ಲಿರುವ ನೀರಾವರಿ, ಕುಡಿಯುವ ನೀರಿನ ಸಮಸ್ಯೆಗೆ ಅಂತ್ಯ ಹಾಡಲಾಗುವುದು ಎಂದು ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು. ಇಲ್ಲಿನ ಯಗಚಿ ಜಲಾಶಯ ವೀಕ್ಷಿಸಿದ ನಂತರ ಯಗಚಿ ವಸತಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಜಲಾಶಯದಲ್ಲಿ 2.6 ಟಿಎಂಸಿ ನೀರು ಸಂಗ್ರಹವಿದೆ. ಬೇಲೂರು, ಅರಸೀಕೆರೆ, ಚಿಕ್ಕಮಗಳೂರು ಪಟ್ಟಣಗಳಿಗೆ ಕುಡಿಯುವ ನೀರನ್ನು ಮೀಸಲಿಟ್ಟು, ಉಳಿದ ನೀರನ್ನು ಹಳೇಬೀಡು ಮಾದಿಹಳ್ಳಿ ಹೋಬಳಿಗೆ ಕಾಲುವೆ ಮೂಲಕ ಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಸದ್ಯ ನಾಲೆ…