ಬೆಂಗಳೂರು: ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿ ಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಕಾಲಮಿತಿಯೊಳಗೆ ಪರಿವರ್ತಿಸುವ ಉಸ್ತುವಾರಿಯನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಹೆಗಲಿಗೆ ಹೊರಿಸಲು ಸರ್ಕಾರ ತೀರ್ಮಾನಿಸಿದೆ. ಈ ಉದ್ದೇಶದಿಂದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜನವರಿ 2ರಂದು ಬೆಂಗಳೂರು ನಗರ, ರಾಮನಗರ, ಮಂಡ್ಯ ಹಾಗೂ ಮೈಸೂರು ಜಿಲ್ಲಾಧಿಕಾರಿಗಳು ಮತ್ತು ವಿವಿಧ ಇಲಾಖೆ ಅಧಿಕಾರಿಗಳ ಸಭೆ ಕರೆದಿದ್ದಾರೆ. ಹೆದ್ದಾರಿ ಕಾಮಗಾರಿ ಜನವರಿ 15 ರಿಂದ 11 ಕ್ಯಾಂಪ್‍ಗಳಲ್ಲಿ ಆರಂಭಗೊಳ್ಳಲಿದೆ, ಒಪ್ಪಂದದ ಪ್ರಕಾರ ಕಾಮಗಾರಿ 36 ತಿಂಗ ಳಲ್ಲಿ ಪೂರ್ಣಗೊಳ್ಳಬೇಕಿದೆ. ಆದರೆ 18 ತಿಂಗ ಳಲ್ಲಿ…