ಬೆಂಗಳೂರು,ಏ.17(ಕೆಎಂಶಿ)- ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆ ಯಲು ಸಹಕರಿಸಿದ ಲಕ್ಷಾಂತರ ಕಾರ್ಯ ಕರ್ತರು ಮತ್ತು ಕುಟುಂಬದ ಹಿತೈಷಿಗಳಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೃದಯಾಂತರಾಳದ ಕೃತಜ್ಞತೆ ಸಲ್ಲಿಸಿದರು. ಇಡೀ ಜಗತ್ತು ಕೊರೊನಾ ವೈರಸ್‍ನಿಂದ ತತ್ತರಿಸುತ್ತಿರುವ ಇಂತಹ ಬಿಕ್ಕಟ್ಟಿನ ಸಂದರ್ಭ ದಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ವ್ಯವಸ್ಥಿತವಾಗಿ ಸಾಮಾಜಿಕ ಅಂತರ ಹಾಗೂ ಮುನ್ನೆಚ್ಚರಿಕೆಯ ನಡುವೆ ವಿವಾಹ ಅಚ್ಚುಕಟ್ಟಾಗಿ ನೆರವೇರಿದೆ ಎಂದರು. ಶಾಸಕರು, ಕಾರ್ಯಕರ್ತರು, ಮುಖಂ ಡರು, ಕುಟುಂಬದ ಹಿತೈಷಿಗಳು…
ಏ.20ಕ್ಕೆ ಬಿಬಿಎಂಪಿ ಬಜೆಟ್
April 18, 2020ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಕ್ರಿಯೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸದಸ್ಯರಿಗೆ ಮಾಹಿತಿ ವ್ಯವಸ್ಥೆ ಬೆಂಗಳೂರು, ಏ.17(ಕೆಎಂಶಿ)- ಈ ಬಾರಿಯ ಬಿಬಿಎಂಪಿ ಬಜೆಟ್ ಏ.20 ರಂದು ಮಧ್ಯಾಹ್ನ 12 ಗಂಟೆಗೆ ಮಂಡನೆ ಯಾಗಲಿದ್ದು, ಸಾಮಾಜಿಕ ಅಂತರ ಪಾಲನೆ ಮಾಡಲಾಗುತ್ತದೆ. ಸದಸ್ಯರಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ನೀಡುವ ಕೆಲಸ ಮಾಡಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಬಿಎಂಪಿ ಬಜೆಟ್ ಅನುಮೋದನೆ ಬಹಳ ಮುಖ್ಯವಾದ ವಿಷಯ, ಕೊರೊನಾ…
ಸರ್ವಪಕ್ಷ ನಾಯಕರ ಸಭೆಯಲ್ಲಿ ಸಿದ್ದರಾಮಯ್ಯ ಅವರು ಹೇಳಿದ್ದು
March 30, 2020ಬೆಂಗಳೂರು, ಮಾ.29-ನಮ್ಮ ತಪ್ಪಿನಿಂದ ಯಾವ ನ್ಯೂನತೆ ಆಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ವಿದೇಶದಿಂದ ಬಂದವರ ಆರೋಗ್ಯ ತಪಾಸಣೆ ಸರಿಯಾಗಿ ಆಗುತ್ತಿಲ್ಲ. ಸರ್ಕಾರದ ಮಾಹಿತಿಯೂ ಅಸ್ಪಷ್ಟವಾಗಿದೆ. 23 ಸಾವಿರ ಮಂದಿ ಪೈಕಿ 4.500 ಮಂದಿಯನ್ನು ಇನ್ನೂ ಗುರುತಿಸಬೇಕಿದೆ ಎಂದು ಸರ್ಕಾರ ಹೇಳಿದೆ. ಅವರನ್ನು ಕೂಡಲೇ ಪತ್ತೆ ಮಾಡಬೇಕು. ಮೂರನೇ ಹಂತಕ್ಕೆ ನಾವು ಇನ್ನೂ ಹೋಗಿಲ್ಲ ಎಂದು ಸಚಿವರು ಹೇಳಿದ್ದಾರೆ. ನಂಜನಗೂಡಿನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ. ಆದರೆ. ಆತನಿಗೆ ವಿದೇಶದಿಂದ ಬಂದವರ ಸಂಪರ್ಕ ಇರಲಿಲ್ಲ. ಆದರೂ ಕರೋನ…
ಮೈತ್ರಿ ಸರ್ಕಾರ ಪತನ
July 24, 2019ಬೆಂಗಳೂರು: ಕಾಂಗ್ರೆಸ್-ಜೆಡಿಎಸ್‍ನ 20 ಶಾಸಕರಲ್ಲಿ ಐವರ ಗೈರು ಹಾಗೂ 15 ಮಂದಿಯ ರಾಜೀನಾಮೆಯಿಂದ ಅಸ್ಥಿರಗೊಂಡಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಕೊನೆಗೂ ಪತನವಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿದ್ದ ವಿಶ್ವಾಸಮತದ ನಿರ್ಣಯವನ್ನು ಇಂದು ರಾತ್ರಿ ಏಳು ಇಪ್ಪತ್ತಕ್ಕೆ ಸಭಾಧ್ಯಕ್ಷ ರಮೇಶ್ ಕುಮಾರ್ ಅವರು ಮತಕ್ಕೆ ಹಾಕಿದಾಗ, ಅದರ ಪರವಾಗಿ 99 ಮತಗಳು ಬಿದ್ದರೆ, ಅದರ ವಿರುದ್ಧ 105 ಮತಗಳು ಬಿದ್ದವು. 6 ಮತಗಳಿಂದ 14 ತಿಂಗಳ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡಿತು….
ಬೆಂಗಳೂರಲ್ಲಿ 2 ದಿನ ನಿಷೇಧಾಜ್ಞೆ ಜಾರಿ
July 24, 2019ಬೆಂಗಳೂರು: ನಗರದೆಲ್ಲೆಡೆ ಎರಡು ದಿನ 144 ಸೆಕ್ಷನ್ ಜಾರಿ ಮಾಡಲಾಗಿದೆ. ಇಂದು ಸಂಜೆ 6 ಗಂಟೆಯಿಂದ ಗುರುವಾರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ನಗರದ ಎಲ್ಲ ಬಾರ್, ಪಬ್ ಬಂದ್ ಆಗಿರುತ್ತವೆ ಎಂದು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ. ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ನಿತೀಶ್ ಅಪಾರ್ಟ್‍ಮೆಂಟ್ ನಲ್ಲಿರುವ ವಿಷಯ ತಿಳಿಯುತ್ತಿದ್ದಂತೆ ಇಬ್ಬರಿಗಾಗಿ ನಡುರಸ್ತೆಯಲ್ಲಿ ಇಂದು ಸಂಜೆ ಹೈಡ್ರಾಮಾ ನಡೆದಿದೆ….
ಶಾಸಕಾಂಗ ಪಕ್ಷದ ನಾಯಕ ಶಾಸಕರಿಗೆ ವಿಪ್ ನೀಡಬಹುದು
July 23, 2019ಬೆಂಗಳೂರು: ಶಾಸಕಾಂಗ ಪಕ್ಷದ ನಾಯಕರುಗಳು ತಮ್ಮ ಸದಸ್ಯರನ್ನು ಕಡ್ಡಾಯವಾಗಿ ಸದನದ ಕಲಾಪಗಳಲ್ಲಿ ಭಾಗವಹಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಭಾಧ್ಯಕ್ಷ ರಮೇಶ್‍ಕುಮಾರ್ ವಿಧಾನಸಭೆಯಲ್ಲಿಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಕ್ರಿಯಾಲೋಪದ ಪ್ರಸ್ತಾವಕ್ಕೆ ಇಂದು ತೀರ್ಪು ನೀಡಿದ ಅವರು, ಸುಪ್ರೀಂಕೋರ್ಟ್ ಯಾವ ಅರ್ಥದಲ್ಲಿ ರಾಜೀನಾಮೆ ನೀಡಿರುವ ಸದಸ್ಯರು ಸದನಕ್ಕೆ ಹೋಗುವುದು ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿರುವುದು ತಿಳಿದಿಲ್ಲ. ನ್ಯಾಯಾಲಯದ ಆದೇಶದ ಪ್ರಕಾರ ರಾಜೀನಾಮೆ ನೀಡಿರುವ ಎಲ್ಲಾ ಶಾಸಕರ ಹಕ್ಕು ಮತ್ತು ರಕ್ಷಣೆ…
ಐಎಂಎ ವಂಚನೆ ಪ್ರಕರಣ: ಹನ್ನೊಂದು ಸಾವಿರಕ್ಕೂ ಅಧಿಕ ದೂರು ದಾಖಲು
June 12, 2019ಬೆಂಗಳೂರು: ಹೂಡಿಕೆ ಹೆಸರಿನಲ್ಲಿ ಸಹಸ್ರಾರು ಜನರಿಗೆ ವಂಚಿಸಿರುವ ಪ್ರತಿಷ್ಠಿತ ಐಎಂಎ ಜ್ಯುವೆಲ್ಲರ್ಸ್ ಮಾಲೀಕ ಮುಹಮ್ಮದ್ ಮನ್ಸೂರ್ ಖಾನ್ ವಿರುದ್ಧ 11 ಸಾವಿರಕ್ಕೂ ಅಧಿಕ ದೂರು ದಾಖಲಾಗಿದೆ. ಈ ಮಧ್ಯೆ ಮನ್ಸೂರ್ ದುಬೈಗೆ ಪರಾರಿಯಾಗಿರುವ ಸಂಶಯ ವ್ಯಕ್ತವಾಗಿದೆ. ಆತ ಕಳೆದ ತಿಂಗಳಾಂತ್ಯದಲ್ಲಿ ದುಬೈಗೆ ತೆರಳಿ ರುವುದಾಗಿ ಸ್ವತಃ ಹೂಡಿಕೆದಾರರೇ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆತಂಕಕ್ಕೊಳ ಗಾದ ಹೂಡಿಕೆದಾರರು ಮಂಗಳವಾರ ಕೂಡ ಸಹಸ್ರಾರು ಸಂಖ್ಯೆಯಲ್ಲಿ ದೂರು ನೀಡಲು ಬಂದಿದ್ದ ದೃಶ್ಯ ಶಿವಾಜಿನಗರದ ಶಾದಿ ಮಹಲ್ ನಲ್ಲಿ ಕಂಡುಬಂತು. ಪ್ರತಿಯೊಬ್ಬರ…
ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಿದ್ದರೆ 10 ಕ್ಷೇತ್ರ ಗೆಲ್ಲುತ್ತಿತ್ತು
June 7, 2019ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿ ಕೊಳ್ಳದೆ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಬೇಕಾಗಿತ್ತು ಎಂದು ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ಹೀನಾಯ ಸೋಲು ಕಂಡಿದ್ದು, ಈ ಬಗ್ಗೆ ಉಭಯ ಪಕ್ಷಗಳ ನಾಯಕರು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿರುವಾಗಲೇ ಸುಮಲತಾ ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಏಕಾಂಗಿ ಯಾಗಿ ಸ್ಪರ್ಧಿಸಿದ್ದರೆ 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತಿತ್ತು. ಆದರೆ, ಮೈತ್ರಿಯಿಂದಾಗಿ ಕೇವಲ…
ಆಪರೇಷನ್ ಕಮಲಕ್ಕೆ ಪ್ರತಿ ಆಪರೇಷನ್ ನಡೆಸಲು ಮೈತ್ರಿ ನಾಯಕರ ಸಿದ್ಧತೆ
June 3, 2019ಬೆಂಗಳೂರು: ಬಿಜೆಪಿಯ ಆಪರೇಷನ್ ಕಮಲಕ್ಕೆ ಪ್ರತಿ ಆಪರೇ ಷನ್ ನಡೆಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ನಾಯಕರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೆ ಪೂರಕವಾಗಿ ಬಿಜೆಪಿಯ ಕನಕಗಿರಿ ಶಾಸಕ ಬಸವರಾಜ್ ದಡೇಸಗೂರು ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೊತೆ ಕೈ ಕುಲುಕುತ್ತಿರುವ ಫೋಟೋ ವೈರಲ್ ಆಗಿದೆ. ಬಿಜೆಪಿಯ ಶಿರಗುಪ್ಪ ಶಾಸಕ ಸೋಮಲಿಂಗಪ್ಪ, ಈ ಹಿಂದೆ ಜೆಡಿಎಸ್ ಶಾಸಕರಾಗಿದ್ದು, ಹಾಲಿ ರಾಯ ಚೂರು ನಗರದ ಬಿಜೆಪಿ ಶಾಸಕರಾಗಿ ರುವ ಡಾ.ಶಿವರಾಜ ಪಾಟೀಲ್, ಸುರಪುರ ಶಾಸಕ ರಾಜೂಗೌಡ, ಕನಕಗಿರಿ ಶಾಸಕ…
ಬೆಂಗಳೂರು ಮೆಟ್ರೋ: ಅನುಮಾನಾಸ್ಪದ ವ್ಯಕ್ತಿಗೆ ಪೀಕಲಾಟ!
May 9, 2019ಬೆಂಗಳೂರು: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ತಪಾಸಣೆ ವೇಳೆ ಪರಾರಿಯಾಗಿದ್ದ ಅನುಮಾನಾಸ್ಪದ ವ್ಯಕ್ತಿ ಸ್ವತಃ ಡಿಸಿಪಿ ಕಚೇರಿಗೆ ಬಂದು ನೀಡಿ ನಿಜ ಘಟನೆಯನ್ನು ವಿವರಿಸಿದ್ದಾರೆ. ವೈರಲ್ ಆದ ವಿಡಿಯೋದಲ್ಲಿರುವ ವ್ಯಕ್ತಿ ರಿಯಾಜ್ ಅಹ್ಮದ್(70) ಆಗಿದ್ದು, ಮೆಜೆಸ್ಟಿಕ್‍ನಲ್ಲಿ ವಾಚ್ ವ್ಯಾಪಾರಿ ಹಾಗೂ ರಿಪೇರಿ ಮಾಡುವ ವ್ಯಕ್ತಿಯಾಗಿದ್ದಾನೆ. ಅವರು ಬೆಂಗಳೂರು ಪಶ್ಚಿಮ ವಿಭಾ ಗದ ಡಿಸಿಪಿ ರವಿ ಡಿ. ಚೆನ್ನಣ್ಣನವರ್ ಅವರ ಕಚೇರಿಗೆ ಹಾಜರಾಗಿ ತನ್ನ ವಿವರ ವನ್ನು ನೀಡಿದ್ದಾರೆ. ನಾನು ನಾಯಂಡ ಹಳ್ಳಿ ನಿವಾಸಿಯಾಗಿದ್ದು, ಮೆಜೆಸ್ಟಿಕ್ ನಲ್ಲಿ ವಾಚ್ ರಿಪೇರಿ…