ನವದೆಹಲಿ: ಕೇಂದ್ರ ಸರ್ಕಾರ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಖ್ಯಾತ ಗಾಯಕ ಭೂಪೇನ್ ಹಜಾರಿಕಾ ಹಾಗೂ ಸಮಾಜ ಸೇವಕ ನಾನಾಜಿ ದೇಶಮುಖ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ `ಭಾರತ ರತ್ನ’ ನೀಡಿ ಗೌರವಿಸಿದೆ. 70ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ಸೇರಿದಂತೆ ಮೂವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿದ್ದು, ಕೃಷಿ, ಪತ್ರಿಕೋದ್ಯಮ ಮತ್ತು ಗ್ರಾಮ ವಿಕಾಸದಲ್ಲಿ ತೊಡಗಿಸಿಕೊಂಡಿದ್ದ ನಾನಾಜಿ ದೇಶಮುಖ್ ಹಾಗೂ ಭೂಪೇನ್ ಹಜಾರಿಕಾ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಲಾಗಿದೆ….