ಮೈಸೂರು: ಮೈಸೂರಿನ ವಿಜಯನಗರ 1ನೇ ಹಂತದಲ್ಲಿರುವ ಭಾರತೀಯ ವಿದ್ಯಾ ಭವನ, ಮೈಸೂರು ಕೇಂದ್ರದ ಕಲಾಭಾರತಿ ವಿಭಾಗದ ವತಿಯಿಂದ ಭಾರತೀಯ ವಿದ್ಯಾಭವನ ಸಂಸ್ಥಾಪಕರಾದ ಕುಲಪತಿ ಡಾ.ಕೆ.ಎಂ.ಮುನ್ಷಿ ಅವರ 132ನೇ ಜನ್ಮೋತ್ಸವದ ಅಂಗವಾಗಿ ಫೆ.8 ಮತ್ತು 9ರಂದು ಭವನೋತ್ಸವ ಕಾರ್ಯ ಕ್ರಮವನ್ನು ಬಿವಿಬಿಯ ಪ್ರೊ.ವೈ.ಟಿ.ತಾತಾಚಾರಿ ಸಭಾಂ ಗಣದಲ್ಲಿ ಏರ್ಪಡಿಸಲಾಗಿದೆ. ಸಂಜೆ 5.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಪ್ರಭಾರ ಉಪಕುಲಪತಿ ಪ್ರೊ. ನಾಗೇಶ್ ವಿ.ಬೆಟ್ಟಕೋಟೆ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಭಾರತೀಯ ವಿದ್ಯಾಭವನದ…