ಮೈಸೂರು: ಅಂತಾರಾಷ್ಟ್ರೀಯ ಚಿತ್ರ ಕಲಾವಿದ, ರಾಜ್ಯ ಲಲಿತ ಕಲಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ದಿವಂಗತ ಪಿ.ಆರ್. ತಿಪ್ಪೇಸ್ವಾಮಿ ಸ್ಮರಣಾರ್ಥ ತುಮಕೂರಿನ ರವೀಂದ್ರ ಕಲಾ ನಿಕೇತನ ಸ್ಕೂಲ್ ಆಫ್ ಆರ್ಟ್ ಮತ್ತು ಕನ್ನಡ ಸಾಹಿತ್ಯ ಭವನದಲ್ಲಿ ಸೆ.24ರಿಂದ ಮೂರು ದಿನಗಳ ಕಾಲ ಪಿ.ಆರ್.ತಿಪ್ಪೇ ಸ್ವಾಮಿ ಸಂಭ್ರಮ-2018 ಮತ್ತು ಪಿಆರ್‍ಟಿ ಕಲಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪಿ.ಆರ್.ತಿಪ್ಪೇ ಸ್ವಾಮಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ ಕದಂಬ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಈ ವಿಷಯ…