ಮೈಸೂರು: ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಅವರ 164ನೇ ಜಯಂತಿಯನ್ನು ಸೋಮವಾರ ಆಚರಿಸಲಾಯಿತು. ಮೈಸೂರಿನ ಕಲಾಮಂದಿರದಲ್ಲಿ ಜಿಲ್ಲಾಡಳಿತದ ಆಶ್ರಯದಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಯಂತ್ಯೋತ್ಸವವನ್ನು ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್ ಉದ್ಘಾಟಿಸಿ, ನಾರಾಯಣ ಗುರುಗಳ ಚಿತ್ರಪಟಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಋಗ್ವೇದಲ್ಲಿ ಹೇಳುವಂತೆ ಉದಾತ್ತ ಚಿಂತನೆಗಳನ್ನು ಸ್ವೀಕರಿಸಲು ಜಾತಿ, ಮತ, ಪ್ರದೇಶ…