ಮೈಸೂರು: ಸಮ್ಮಿಶ್ರ ಸರ್ಕಾರ ಚೊಚ್ಚಲ ಬಜೆಟ್‍ನಲ್ಲಿ ಕರ್ನಾ ಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, ಅದಕ್ಕೆ 25ಕೋಟಿ ಅನುದಾನ ಮೀಸಲಿಟ್ಟಿರುವುದು ಹಾಗೂ ಶಂಕರಾ ಚಾರ್ಯರ ಜಯಂತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸುವುದಕ್ಕೆ ನಿರ್ಧರಿಸಿರುವುದನ್ನು ಸ್ವಾಗತಿಸಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಕಾರ್ಯಕರ್ತರು ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕ ರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು. ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿ ಅವರು ಗುರುವಾರ ಮಂಡಿಸಿದ ಬಜೆಟ್‍ನಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಆದ್ಯತೆ ನೀಡಿ ಅಭಿವೃದ್ಧಿ ಮಂಡಳಿಯನ್ನು…