Tag: BSNL

ವೇತನ ಬಾಕಿಗೆ ಆಗ್ರಹಿಸಿ ಮೈಸೂರಿನಲ್ಲಿ ಬಿಎಸ್‍ಎನ್‍ಎಲ್ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಮೈಸೂರು

ವೇತನ ಬಾಕಿಗೆ ಆಗ್ರಹಿಸಿ ಮೈಸೂರಿನಲ್ಲಿ ಬಿಎಸ್‍ಎನ್‍ಎಲ್ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

February 25, 2019

ಮೈಸೂರು: ಕಳೆದ ಆರು ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಬಿಎಸ್‍ಎನ್‍ಎಲ್ ಸಂಸ್ಥೆಯ ಗುತ್ತಿಗೆ ಕಾರ್ಮಿಕರು ಬಿಎಸ್‍ಎನ್‍ಎಲ್ ನಾನ್ ಪರ್ಮನೆಂಟ್ ಎಂಪ್ಲಾಯಿಸ್ ಯೂನಿಯನ್‍ನ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಘಟಕ ಹಾಗೂ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಮೈಸೂರು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಮೈಸೂರಿನ ಜಯಲಕ್ಷ್ಮೀಪುರಂನ ಬಿಎಸ್‍ಎನ್‍ಎಲ್ ಸಂಸ್ಥೆಯ ದೂರ ಸಂಪರ್ಕ ಮಹಾಪ್ರಬಂಧಕರ ಕಾರ್ಯಾಲಯದ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಗುತ್ತಿಗೆ ಕಾರ್ಮಿಕರಿಗೆ ಕಳೆದ ಆರು ತಿಂಗಳಿಂದ…

ಬಿಎಸ್‍ಎನ್‍ಎಲ್ ನೌಕರರ ಮುಷ್ಕರ
ಮೈಸೂರು

ಬಿಎಸ್‍ಎನ್‍ಎಲ್ ನೌಕರರ ಮುಷ್ಕರ

February 19, 2019

ಮೈಸೂರು: ವೇತನ ಹೆಚ್ಚಳ, 4ಜಿ ಸ್ಪೆಕ್ಟ್ರಮ್ ಹಂಚಿಕೆ ಸೇರಿದಂತೆ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸು ವಂತೆ ಆಗ್ರಹಿಸಿ ಭಾರತೀಯ ಸಂಚಾರ ನಿಗಮ ಲಿಮಿಟೆಡ್ (ಬಿಎಸ್‍ಎನ್‍ಎಲ್) ನೌಕರರು ಇಂದಿನಿಂದ ಮೂರು ದಿನಗಳ ಮುಷ್ಕರ ಆರಂಭಿಸಿದ್ದಾರೆ. ಆಲ್ ಯೂನಿಯನ್ಸ್ ಅಂಡ್ ಅಸೋಸಿ ಯೇಷನ್ಸ್ ಆಫ್ ಬಿಎಸ್‍ಎನ್‍ಎಲ್ (ಎಯುಎಬಿ) ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮೈಸೂರಿನ ಜಯಲಕ್ಷ್ಮಿಪುರಂ ಹಾಗೂ ನಜರ್‍ಬಾದ್‍ನಲ್ಲಿರುವ ಬಿಎಸ್‍ಎನ್‍ಎಲ್ ಕಚೇರಿಗಳ ಬಳಿ ನೌಕರರು ಪ್ರತಿಭಟನಾ ಧರಣಿ ನಡೆಸಿದರು. ಶೇ.15 ರಷ್ಟು ವೇತನ ಹೆಚ್ಚಿಸಬೇಕು. ಮ್ಯಾನೇಜ್‍ಮೆಂಟ್ ನೀಡಿರುವ ಪ್ರಸ್ತಾವನೆಯಂತೆ ಬಿಎಸ್‍ಎನ್‍ಎಲ್‍ಗೆ…

ಕಳಪೆ ಸೇವೆ: ಬಿಎಸ್‍ಎನ್‍ಎಲ್ ಅಧಿಕಾರಿಗಳಿಗೆ ಸಂಸದರ ತರಾಟೆ
ಮೈಸೂರು

ಕಳಪೆ ಸೇವೆ: ಬಿಎಸ್‍ಎನ್‍ಎಲ್ ಅಧಿಕಾರಿಗಳಿಗೆ ಸಂಸದರ ತರಾಟೆ

December 2, 2018

ಮೈಸೂರು: ಬಿಎಸ್‍ಎನ್‍ಎಲ್ ಕಳಪೆ ಸೇವೆ, ಅಧಿಕಾರಿಗಳ ಗೈರು ಹಾಜರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಸಂಸದರಾದ ಆರ್.ಧ್ರುವನಾರಾಯಣ್, ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತು ವಾರಿ ಸಮಿತಿ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿ ಸಂಬಂಧ ಸಂಸದ ರಿಬ್ಬರೂ ಕಿಡಿಕಾರಿದರು. ಕಳೆದ ಸಭೆಯಲ್ಲಿ ಬಿಎಸ್‍ಎನ್‍ಎಲ್ ಸೇವೆ ಬಗ್ಗೆ ಕೇಳಿ ಬಂದಿದ್ದ ದೂರಿಗೆ ಸಂಬಂ ಧಿಸಿದಂತೆ ಅಧಿಕಾರಿಗಳು ನೀಡಿದ ಅನು ಪಾಲನ ವರದಿ ಹಿನ್ನೆಲೆಯಲ್ಲಿ…

ಬಿಎಸ್‍ಎನ್‍ಎಲ್ ಕಚೇರಿಗಳಲ್ಲಿ ಮಾನವ ಸಂಪನ್ಮೂಲ ಸೇವೆ ಒದಗಿಸುವ ಟೆಂಡರ್ ಬಗ್ಗೆ ಆಕ್ಷೇಪ
ಮೈಸೂರು

ಬಿಎಸ್‍ಎನ್‍ಎಲ್ ಕಚೇರಿಗಳಲ್ಲಿ ಮಾನವ ಸಂಪನ್ಮೂಲ ಸೇವೆ ಒದಗಿಸುವ ಟೆಂಡರ್ ಬಗ್ಗೆ ಆಕ್ಷೇಪ

September 7, 2018

ಮೈಸೂರು: ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಬಿಎಸ್ ಎನ್‍ಎಲ್ (ಪ್ರಧಾನ ವ್ಯವಸ್ಥಾಪಕರು-ಟೆಲಿಕಾಂ) ಕಚೇರಿ ವ್ಯಾಪ್ತಿಯಲ್ಲಿ ಮಾನವ ಸಂಪನ್ಮೂಲ ಸೇವೆ ಒದಗಿಸುವ ಸಂಬಂಧ ಸಣ್ಣ ಹಾಗೂ ಮಧ್ಯಮ ಸಂಸ್ಥೆಗಳಿಗೆ ಅವಕಾಶ ನೀಡದೇ ಅನ್ಯಾಯ ಮಾಡಲಾಗುತ್ತಿದೆ ಎಂದು ರಾಷ್ಟ್ರೀಯ ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕುಗಳ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಎಸ್.ಎಂ.ಪ್ರಸಾದ್ ಆರೋಪಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊರಗುತ್ತಿಗೆ ಆಧಾರದಲ್ಲಿ ಮಾನವ ಸಂಪನ್ಮೂಲ ಸೇವೆಗಳನ್ನು ಒದಗಿಸಲು ಕಾನೂನುಬಾಹಿರ ನಿಯಮಗಳನ್ನು ಅಳವಡಿಸಿಕೊಳ್ಳಲಾಗಿದೆ. ಹೀಗಾಗಿ ಹೌಸ್ ಕೀಪಿಂಗ್, ಸ್ವಚ್ಛತೆ…

ಮರು ನೇಮಕಕ್ಕೆ ಆಗ್ರಹಿಸಿ ವಜಾಗೊಂಡ ಬಿಎಸ್‍ಎನ್‍ಎಲ್ ನೌಕರರ ಪ್ರತಿಭಟನೆ
ಮೈಸೂರು

ಮರು ನೇಮಕಕ್ಕೆ ಆಗ್ರಹಿಸಿ ವಜಾಗೊಂಡ ಬಿಎಸ್‍ಎನ್‍ಎಲ್ ನೌಕರರ ಪ್ರತಿಭಟನೆ

June 29, 2018

ಮೈಸೂರು: ಹೈಕೋರ್ಟ್ ತೀರ್ಪು ನೀಡಿದ್ದರೂ ಕೆಲಸಕ್ಕೆ ಸೇರಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಬಿಎಸ್‍ಎನ್‍ಎಲ್ ಕಚೇರಿ ಬಳಿ ಗುರುವಾರ ವಜಾಗೊಂಡ ನೌಕರರು ಪ್ರತಿಭಟನೆ ನಡೆಸಿದರು. ಸಂಸ್ಥೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರರನ್ನು ಸಂಸ್ಥೆಯ ಅಧಿಕಾರಿಗಳು ಕೆಲಸದಿಂದ ತೆಗೆದು ಹಾಕಿದ್ದಾರೆ. ನಿಯಮ ಗಾಳಿಗೆ ತೂರಲಾಗಿದೆ. ಇವರನ್ನು ಮರು ನೇಮಕ ಮಾಡಿಕೊಳ್ಳುವಂತೆ ಹೈಕೋರ್ಟ್ ಆದೇಶಿಸಿದ್ದರೂ ಅಧಿಕಾರಿಗಳು ಮಾತ್ರ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕೂಡಲೇ ಮರು ನೇಮಕ ಮಾಡಿಕೊಳ್ಳಬೇಕು….

ಆದಾಯ ಗಳಿಕೆ, ನಿರ್ವಹಣೆಯಲ್ಲಿ ಬಿಎಸ್‍ಎನ್‍ಎಲ್ ಮೈಸೂರು ದೂರಸಂಪರ್ಕ ಜಿಲ್ಲೆ ಹೆಗ್ಗಳಿಕೆ
ಮೈಸೂರು

ಆದಾಯ ಗಳಿಕೆ, ನಿರ್ವಹಣೆಯಲ್ಲಿ ಬಿಎಸ್‍ಎನ್‍ಎಲ್ ಮೈಸೂರು ದೂರಸಂಪರ್ಕ ಜಿಲ್ಲೆ ಹೆಗ್ಗಳಿಕೆ

June 2, 2018

ಮೈಸೂರು: ಮೈಸೂರು ಮತ್ತು ಚಾಮರಾಜನಗರ ಕಂದಾಯ ಜಿಲ್ಲೆಗಳನ್ನು ಒಳಗೊಂಡಿರುವ ಮೈಸೂರು ದೂರಸಂಪರ್ಕ ಜಿಲ್ಲೆಯ ಸೆಕೆಂಡರಿ ಸ್ವಿಚಿಂಗ್ ಏರಿಯಾ ಕಳೆದ ವರ್ಷ ರೂ.90 ಕೋಟಿ ಆದಾಯ ಗಳಿಸಿದ್ದು, ಕರ್ನಾಟಕದಲ್ಲಿ ಅತ್ಯುತ್ತಮ ನಿರ್ವಹಣೆಯ ಸೆಕೆಂಡರಿ ಸ್ವಿಚಿಂಗ್ ಏರಿಯಾ (ಎಸ್‍ಎಸ್‍ಎ) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬಿಎಸ್‍ಎನ್‍ಎಲ್ ಕರ್ನಾಟಕ ವೃತ್ತ ಮುಖ್ಯ ಪ್ರಧಾನ ವ್ಯವಸ್ಥಾಪಕ ಆರ್.ಮಣ ಅವರು ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ಪ್ರಾದೇಶಿಕ ದೂರಸಂಪರ್ಕ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಮೈಸೂರು ಟೆಲಿಕಾಂ ಜಿಲ್ಲೆಯು ಹೆಚ್ಚಿನ ಬಳಕೆದಾರರ ಬೇಡಿಕೆಯನ್ನು…

Translate »