ಗುಂಡ್ಲುಪೇಟೆ: ತಮ್ಮ ಗ್ರಾಮಕ್ಕೆ ಸಮರ್ಪಕವಾಗಿ ಬಸ್ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಮಲ್ಲಯ್ಯನಪುರ ಗ್ರಾಮಸ್ಥರು ಪಟ್ಟಣದ ಸಾರಿಗೆ ಡಿಪೋಗೆ ಮುತ್ತಿಗೆ ಹಾಕಿ ಒತ್ತಾಯಿಸಿದರು. ನಾಲ್ಕೈದು ಆಟೋಗಳಲ್ಲಿ ಆಗಮಿಸಿದ ಮಲ್ಲಯ್ಯನಪುರ ಗ್ರಾಮದ ವಿದ್ಯಾರ್ಥಿಗಳು ಹಾಗೂ ಪಾಲಕರು ಸಾರಿಗೆ ಡಿಪೋ ಎದುರು ಒಗ್ಗೂಡಿ ಸ್ಥಳಕ್ಕೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿ ಗಳು ಬರುವಂತೆ ಪಟ್ಟು ಹಿಡಿದರು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಡಿಪೋ ಮ್ಯಾನೇಜರ್ ಎಂ.ಜಿ.ಜಯಕುಮಾರ್ ಗ್ರಾಮಸ್ಥರ ಮನವಿಯನ್ನು ಆಲಿಸಿದರು. ಗ್ರಾಮದಿಂದ ಪ್ರತಿ ದಿನವೂ ನೂರಾರು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ…