ಮೈಸೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವಿ.ಶ್ರೀನಿವಾಸ್ ಅವರಿಗೆ ಜು.24ರಂದು ಮೈಸೂರು ಗ್ರಾಮಾಂ ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಸಮಿತಿ ಉಪಾಧ್ಯಕ್ಷ ಆರ್.ಪ್ರಕಾಶ್‍ಕುಮಾರ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11.30ಕ್ಕೆ ಪುರಭವನ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ರೈಲು ನಿಲ್ದಾಣ ವೃತ್ತದಲ್ಲಿರುವ ಡಾ.ಬಾಬು ಜಗಜೀವನರಾಂ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬೂ ಜಗಜೀವನರಾಂ ಭಾವಚಿತ್ರಗಳ ಮೆರವಣಿಗೆ…