ಚಿನಕುರಳಿ: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿಯಲ್ಲಿದ್ದು, ಅವುಗಳನ್ನು ಉಳಿಸಿ ಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಜಿಪಂ ಸದಸ್ಯ ಸಿ.ಅಶೋಕ್ ತಿಳಿಸಿದರು. ಚಿನಕುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ 2018-19ನೇ ಸಾಲಿನ ಚಿನಕುರಳಿ ವೃತ್ತ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾ ಕೂಟ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದವರೇ ದೊಡ್ಡ ವ್ಯಕ್ತಿಗಳಾಗಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕೆಂದು ಮನವಿ ಮಾಡಿದರು….