ಬೆಂಗಳೂರು: ಕರ್ನಾಟಕ ರಾಜ್ಯದ 28 ಕ್ಷೇತ್ರಗಳಿಗೆ ನಡೆದ ಲೋಕಸಭಾ ಚುನಾವಣೆಯ ಸಿ-ವೋಟರ್ ಸಮೀಕ್ಷೆ ಹೊರ ಬಿದ್ದಿದ್ದು, ಬಿಜೆಪಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ 7 ಸ್ಥಾನಗಳನ್ನು ಪಡೆಯಲಿದೆ. ದೇಶದ ಗಮನ ಸೆಳೆದಿದ್ದ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವಿನ ನಗೆ ಬೀರಲಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಪುನರಾಯ್ಕೆ ಆಗಲಿದ್ದಾರೆ. ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಹಾಲಿ ಸಂಸದ ಆರ್.ಧ್ರುವ ನಾರಾಯಣ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿರುವ ಮಾಜಿ…