ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ‘ಕಾವೇರಿ ಗ್ಯಾಲರಿ’ ಸ್ಥಾಪಿಸಲಾಗುವುದು ಎಂದು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷ ಡಾ. ಕಸ್ತೂರಿ ರಂಗನ್ ಇಂದಿಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರೊಂದಿಗೆ ಸಮಾಲೋಚನೆ ನಂತರ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಗ್ಯಾಲರಿಯು ಕಾವೇರಿ ಜಲಾನಯನದ ಪೂರ್ಣ ಇತಿಹಾಸ ಮತ್ತು ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಸಮಗ್ರ ಮಾಹಿತಿಯನ್ನು ಒಳಗೊಂಡಿರುತ್ತದೆ. ಮೈಸೂರಿನಲ್ಲಿ ಗ್ಯಾಲರಿ ಸ್ಥಾಪನೆಗೆ ಮುಖ್ಯಮಂತ್ರಿ ಅವರು ಸಮ್ಮತಿಸಿದ್ದು, ಗ್ಯಾಲರಿಯು ಕಾವೇರಿ ಕೊಳ್ಳದ ಇತಿಹಾಸ, ನೀರಿನ ಲಭ್ಯತೆ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಜಲ…