Tag: Chamarajanagar Dasara

ಚಾಮರಾಜನಗರ ದಸರಾಕ್ಕೆ ಸಂಭ್ರಮದ ತೆರೆ
ಚಾಮರಾಜನಗರ

ಚಾಮರಾಜನಗರ ದಸರಾಕ್ಕೆ ಸಂಭ್ರಮದ ತೆರೆ

October 17, 2018

ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ 4 ದಿನಗಳ ಕಾಲ ನಡೆದ ದಸರಾ ಮಹೋತ್ಸವ ಮಂಗಳವಾರ ಮುಕ್ತಾಯಗೊಂಡಿತು. ಮಹೋತ್ಸವದ ಅಂತಿಮ ದಿನವಾದ ಮಂಗಳವಾರ ಕೂಡ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿನ ಮುಖ್ಯ ವೇದಿಕೆಯಲ್ಲಿ ಸ್ಥಳೀಯ, ರಾಜ್ಯ ಮಟ್ಟದ ಕಲಾವಿದರು ಹಾಗೂ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕದ ಸೊಬಗು ಅನಾವರಣಗೊಂಡಿತು. ಅಂತಿಮ ದಿನದ ಆಕರ್ಷಣೆಯಾಗಿದ್ದ ಖ್ಯಾತ ಗಾಯಕ ಹೇಮಂತ್ ಅವರ ಕನ್ನಡ ರಸಸಂಜೆ ಕಾರ್ಯಕ್ರಮ ನೆರೆದಿದ್ದ ಪ್ರೇಕ್ಷಕರ ಮನಸೆಳೆಯಿತು. ಜಿಲ್ಲೆಯ ವಿವಿಧ ಕಾಲೇಜು ವಿದ್ಯಾರ್ಥಿಗಳ ನೃತ್ಯ ರೂಪಕಕ್ಕೆ ನಗರದ ಜನತೆ ರೋಮಾಂಚನಗೊಂಡರು. ಪ್ರತಿದಿನ…

ಗ್ರಾಮೀಣ ಸೊಗಡು ಬಿಂಬಿಸಿದ ರೈತ ದಸರಾ
ಚಾಮರಾಜನಗರ

ಗ್ರಾಮೀಣ ಸೊಗಡು ಬಿಂಬಿಸಿದ ರೈತ ದಸರಾ

October 16, 2018

ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಚಾ.ನಗರದಲ್ಲಿ ಇಂದು ನಡೆದ ರೈತ ದಸರಾ ಕಾರ್ಯಕ್ರಮವು ಸಂಪೂರ್ಣವಾಗಿ ಗ್ರಾಮೀಣ ಸೊಗಡನ್ನು ಬಿಂಬಿಸುವ ಮೂಲಕ ಎಲ್ಲರ ಗಮನ ಸೆಳೆಯಿತು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಸಹಯೋಗದೊಂದಿಗೆ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ರೈತ ದಸರಾ ಅಂಗವಾಗಿ ಅಲಂಕೃತಗೊಂಡ ಎತ್ತಿನಗಾಡಿ ಮೆರವಣಿಗೆಗೆ ಚಾಮರಾಜೇ ಶ್ವರ ದೇವಾಲಯ ಬಳಿ ಹಿಂದುಳಿದ ವರ್ಗ ಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು. ಸ್ವತಃ ಉಸ್ತುವಾರಿ ಸಚಿವರೇ ಎತ್ತಿನ…

ವರ್ಷಧಾರೆ ನಡುವೆ ಹರಿದ ಸಂಗೀತ ರಸಧಾರೆ ಸಂಗೀತ ಕಟ್ಟಿ ಗಾಯನಕ್ಕೆ ತಲೆದೂಗಿದ ಜನತೆ
ಚಾಮರಾಜನಗರ

ವರ್ಷಧಾರೆ ನಡುವೆ ಹರಿದ ಸಂಗೀತ ರಸಧಾರೆ ಸಂಗೀತ ಕಟ್ಟಿ ಗಾಯನಕ್ಕೆ ತಲೆದೂಗಿದ ಜನತೆ

October 15, 2018

ಚಾಮರಾಜನಗರ: ಚಾಮರಾಜನಗರದಲ್ಲಿ ಇಂದು ವರುಣನ ವರ್ಷ ಧಾರೆಯ ನಡುವೆಯೇ ಸಂಗೀತದ ರಸಧಾರೆಯೇ ಹರಿಯಿತು. ಖ್ಯಾತ ಗಾಯಕಿ ಸಂಗೀತ ಕಟ್ಟಿ ಅವರ ಭಾವಗೀತೆ, ಜನಪದಗೀತೆ, ಭಕ್ತಿಗೀತೆಗಳ ಭಾವ ಲಹರಿ ನಗರದಲ್ಲೆಡೆ ಅನುರಣಿಸಿತು. ಚಾಮರಾಜನಗರದಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಖ್ಯಾತ ಗಾಯಕಿ ಸಂಗೀತ ಕಟ್ಟಿ ಅವರ ಸಂಗೀತ ಕಾರ್ಯಕ್ರಮ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ಇಲ್ಲಿನ ಶ್ರೀ ಚಾಮರಾಜೇಶ್ವರ ದೇವ ಸ್ಥಾನದ ಮುಂಭಾಗ ಹಾಕಲಾಗಿದ್ದ ಅದ್ಧೂರಿ ಬೃಹತ್ ವೇದಿಕೆಯಲ್ಲಿ ಆಯೋಜಿಸಲಾಗಿತ್ತು. ಎಲ್ಲರಿಗೂ ನಮಸ್ಕಾರ ಎನ್ನುತ್ತಾ ರಾತ್ರಿ…

ಚಾಮರಾಜನಗರ ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ
ಚಾಮರಾಜನಗರ

ಚಾಮರಾಜನಗರ ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

October 14, 2018

ಚಾಮರಾಜನಗರ:  ಮೈಸೂರಿನ ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ 4 ದಿನಗಳ ಕಾಲ ಆಯೋಜಿಸಿರುವ ದಸರಾ ಕಾರ್ಯಕ್ರಮಕ್ಕೆ ಶನಿವಾರ ಅದ್ಧೂರಿ ಚಾಲನೆ ದೊರೆಯಿತು. ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಆವ ರಣದಲ್ಲಿ ನಿರ್ಮಾಣವಾಗಿರುವ ಬೃಹತ್ ವೇದಿಕೆ ಯಲ್ಲಿ ಮೊದಲ ದಿನ ನಡೆದ ಸಾಂಸ್ಕೃತಿಕ ಕಾರ್ಯ ಕ್ರಮದಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಪ್ರೇಕ್ಷ ಕರಿಗೆ ಸಂಗೀತದ ರಸದೌತಣ ಉಣಬಡಿಸಿದರು. ರಾತ್ರಿ 8.05ಕ್ಕೆ ವೇದಿಕೆಯ ಮೇಲೆ ಕಪ್ಪು ಟೀ ಶರ್ಟ್, ಬಿಳಿ ಕೋಟ್ ಹಾಗೂ ಬಿಳಿ ಪ್ಯಾಂಟ್ ಧರಿಸಿ ಭಜರಂಗಿ ಚಿತ್ರದ…

ನಾಳೆಯಿಂದ ಚಾಮರಾಜನಗರದಲ್ಲಿ ದಸರಾ
ಚಾಮರಾಜನಗರ

ನಾಳೆಯಿಂದ ಚಾಮರಾಜನಗರದಲ್ಲಿ ದಸರಾ

October 12, 2018

ಚಾಮರಾಜನಗರ: ಚಾ.ನಗರದಲ್ಲಿ ಅ.13ರಿಂದ 16ರವರೆಗೆ ಆಯೋಜಿಸಿರುವ ದಸರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಮೆರವಣಿಗೆ, ರಂಗೋಲಿ ಸ್ಪರ್ಧೆ, ರೈತ ದಸರಾ, ದಸರಾ ನಡಿಗೆ ಹಾಗೂ ಚಲನಚಿತ್ರೋತ್ಸವ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಗುರುವಾರ ಸುದ್ದಿ ಗೋಷ್ಠಿಯಲ್ಲಿ ಅವರು ದಸರಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಪ್ರತಿದಿನ ಸಂಜೆ 4.30ರಿಂದ ರಾತ್ರಿ 10.30ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮೊದಲ…

Translate »