ಚಾಮರಾಜನಗರ: ಜೀವನದಲ್ಲಿ ಆರೋಗ್ಯವೇ ಸಂಪತ್ತಾಗಿದ್ದು, ಇದನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಕಾಳಜಿ ವಹಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಬಸವ ರಾಜ ಸಲಹೆ ಮಾಡಿದರು. ನಗರದ ಜಿಲ್ಲಾ ಕಾರಾಗೃಹದಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ವೈದ್ಯಕೀಯ ವಿಜ್ಞಾನ ಸಂಸ್ಥೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಸಂಯುಕ್ತಾಶ್ರಯದಲ್ಲಿ ವಿಚಾರಣಾಧೀನ ಕೈದಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯನಿಗೆ ಆರೋಗ್ಯಕ್ಕೆ ಮಿಗಿಲಾದ ಭಾಗ್ಯವಿಲ್ಲ. ಉತ್ತಮ ಆರೋಗ್ಯ ಹೊಂದಿ ದ್ದರೆ ನೆಮ್ಮದಿ ಜೀವನ…