Tag: Chamarajanagar

ಪ್ರಚಾರಕ್ಕಿಳಿದ ಶ್ರೀನಿವಾಸ್‍ಪ್ರಸಾದ್; ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ಚಾಮರಾಜನಗರ

ಪ್ರಚಾರಕ್ಕಿಳಿದ ಶ್ರೀನಿವಾಸ್‍ಪ್ರಸಾದ್; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

March 23, 2019

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್‍ಪ್ರಸಾದ್, ಪಕ್ಷದ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಜಿಲ್ಲೆಯ ಗುಂಡ್ಲುಪೇಟೆ, ಚಾಮರಾಜನಗರ ಮತ್ತು ಕೊಳ್ಳೇಗಾಲಕ್ಕೆ ಶುಕ್ರವಾರ ಆಗಮಿಸಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿದರು. ಈ ಮೂಲಕ ಚುನಾವಣಾ ಪ್ರಚಾರಕ್ಕೆ ಅಧಿ ಕೃತವಾಗಿ ಚಾಲನೆ ನೀಡಿದರು. ಚಾಮರಾಜನಗರದಲ್ಲಿ ನಡೆದ ಸಭೆ ಯಲ್ಲಿ ಮಾತನಾಡಿದ ವಿ.ಶ್ರೀನಿವಾಸ್ ಪ್ರಸಾದ್, ನೂರಾರು ವರ್ಷಗಳ ಇತಿ ಹಾಸ ಇರುವ ಕಾಂಗ್ರೆಸ್ ಪಕ್ಷ ಇಂದು ದುರ್ಬಲ ಆಗಿದೆ. ಬಹುತೇಕ ರಾಜ್ಯ ಗಳಲ್ಲಿ ಕಾಂಗ್ರೆಸ್ ಜೊತೆ…

ರಾಹುಲ್ ಗಾಂಧಿ ಪ್ರಧಾನಿಯಾಗಲಿದ್ದಾರೆ: ಸಿ.ಪುಟ್ಟರಂಗಶೆಟ್ಟಿ
ಚಾಮರಾಜನಗರ

ರಾಹುಲ್ ಗಾಂಧಿ ಪ್ರಧಾನಿಯಾಗಲಿದ್ದಾರೆ: ಸಿ.ಪುಟ್ಟರಂಗಶೆಟ್ಟಿ

March 23, 2019

ಚಾಮರಾಜನಗರ: ಮುಂಬರುವ ಲೋಕಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗಳಿಸಲಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಆಗಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗ ಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ ಚಂದಕವಾಡಿಯಲ್ಲಿ ಚಾಮರಾಜ ನಗರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಲೋಕಸಭಾ ಚುನಾವಣಾ ಹಿನ್ನೆಲೆ ನಡೆದ ಚಂದಕವಾಡಿ ಮತ್ತು ಹರದನಹಳ್ಳಿ ಜಿಪಂ ಕ್ಷೇತ್ರದ ವ್ಯಾಪ್ತಿಯ ಪಕ್ಷದ ಮುಖಂಡರು, ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಎಲ್ಲಾ ವರ್ಗದ ಸಮುದಾ ಯದವರಿಗೂ ಸಮಪಾಲು-ಸಮಬಾಳು ಕೊಟ್ಟಿದೆ….

ಅಧಿಕಾರದಿಂದ ಬಿಜೆಪಿ ದೂರವಿಡಲು ಜಾತ್ಯತೀತ ಶಕ್ತಿಗಳು ಒಂದಾಗಬೇಕು
ಚಾಮರಾಜನಗರ

ಅಧಿಕಾರದಿಂದ ಬಿಜೆಪಿ ದೂರವಿಡಲು ಜಾತ್ಯತೀತ ಶಕ್ತಿಗಳು ಒಂದಾಗಬೇಕು

March 21, 2019

ಸಂಸದ, ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್ ಚಾಮರಾಜನಗರ: ಜಾತ್ಯತೀತ ಶಕ್ತಿಗಳು ಒಂದಾಗಿ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು ಎಂದು ಹಾಲಿ ಸಂಸದ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್ ಹೇಳಿದರು. ನಗರದ ವರ್ತಕರ ಭವನದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್, ಬಿಎಸ್ಪಿ ಮೈತ್ರಿ ಸರ್ಕಾರವಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿಯಾಗಿದೆ. ರಾಜ್ಯ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದು, 8 ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡಲಾಗಿದೆ. ಚಾಮರಾಜನಗರ ಮೀಸಲು…

ಮಾತಿನಲ್ಲಿ ಮಾತ್ರ ಮೋದಿ ಮೋಡಿ, ಅಭಿವೃದ್ಧಿಯಲ್ಲಿ ಶೂನ್ಯ
ಚಾಮರಾಜನಗರ

ಮಾತಿನಲ್ಲಿ ಮಾತ್ರ ಮೋದಿ ಮೋಡಿ, ಅಭಿವೃದ್ಧಿಯಲ್ಲಿ ಶೂನ್ಯ

March 21, 2019

ಗುಂಡ್ಲುಪೇಟೆ: ಪ್ರಧಾನಿ ನರೇಂದ್ರ ಮೋದಿ ಕೇವಲ ಮಾತಿನಲ್ಲಿ ಮಾತ್ರ ಮೋಡಿ ಮಾಡುತ್ತಿದ್ದಾರೆ. ಆದರೆ ಅಭಿವೃದ್ಧಿಯಲ್ಲಿ ಶೂನ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಟೀಕಿಸಿದರು. ಪಟ್ಟಣದ ಸೋಮೇಶ್ವರ ವಿದ್ಯಾರ್ಥಿ ನಿಲಯದ ಮುಂಭಾಗದಲ್ಲಿ ಬ್ಲಾಕ್ ಕಾಂಗ್ರೆಸ್‍ನಿಂದ ಆಯೋಜಿಸಿದ್ದ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಜನರಿಗೆ ಅಚ್ಚೇ ದಿನ್ ಬರುತ್ತದೆ ಎಂದು ಬಾಯಿ ಮಾತಿನಲ್ಲಿ ಹೇಳುತ್ತಿದ್ದು, ಸಾಧನೆ ಮಾತ್ರ ಶೂನ್ಯ. ನೋಟು ಅನಾಮಾನ್ಯೀಕರಣ ಮಾಡಿ ಬಡವರನ್ನು ಸಂಕಷ್ಟಕ್ಕೆ ಸಿಲುಕಿಸಿ, ಯುವಜನತೆಯನ್ನು ನಿರುದ್ಯೋಗಿಯಾಗಿಸಿದ್ದೇ ಇವರ ಸಾಧನೆ…

ಚುನಾವಣಾ ನಿರತ ಅಧಿಕಾರಿಗಳಿಗೆ ತರಬೇತಿ, ಕಿರುಪರೀಕ್ಷೆ
ಚಾಮರಾಜನಗರ

ಚುನಾವಣಾ ನಿರತ ಅಧಿಕಾರಿಗಳಿಗೆ ತರಬೇತಿ, ಕಿರುಪರೀಕ್ಷೆ

March 21, 2019

ಚಾಮರಾಜನಗರ: ಯಾವುದೇ ಚುನಾವಣೆ ಯಶಸ್ಸು ಕಾಣಬೇಕಾದರೆ ಅಧಿಕಾರಿಗಳಿಗೆ ಸಮರ್ಪಕ ಹಾಗೂ ಪರಿಣಾಮಕಾರಿ ತರಬೇತಿ ಬಹಳ ಮುಖ್ಯವಾಗಿದೆ. ಚುನಾವಣೆ ಸುಗಮವಾಗಿ ನಡೆಯಲು ತರಬೇತಿ ಕಡ್ಡಾಯ ಎಂದು ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ತಿಳಿಸಿದರು. ನಗರದ ಜಿಪಂ ಸಭಾಂಗಣದಲ್ಲಿಂದು ಚಾಮರಾಜನಗರ ಲೋಕಸಭಾ ಚುನಾವಣೆಯ ಕ್ಷೇತ್ರ ವ್ಯಾಪ್ತಿಗೆ ಬರುವ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಕ್ಕೆ ನಿಯೋಜಿತರಾಗಿರುವ ಜಿಲ್ಲಾ ಮಟ್ಟದ ಸೆಕ್ಟರ್ ಅಧಿಕಾರಿಗಳು ಮತ್ತು ಮಾಸ್ಟರ್ ಟ್ರೈನರ್‍ಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಹಾಗೂ ಕಿರುಪರೀಕ್ಷೆ ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿದರು. ಚುನಾವಣೆಯ…

ನ್ಯಾಯಾಲಯಕ್ಕೆ ಹಾಜರಾದ ನಕ್ಸಲ್ ಮುಖಂಡ ಏ.10ಕ್ಕೆ ವಿಚಾರಣೆ ಮುಂದೂಡಿಕೆ
ಕೊಡಗು

ನ್ಯಾಯಾಲಯಕ್ಕೆ ಹಾಜರಾದ ನಕ್ಸಲ್ ಮುಖಂಡ ಏ.10ಕ್ಕೆ ವಿಚಾರಣೆ ಮುಂದೂಡಿಕೆ

March 20, 2019

ಮಡಿಕೇರಿ: ನಿಷೇಧಿತ ನಕ್ಸಲ್ ಸಂಘಟನೆಯ ಚಟುವಟಿಕೆಯನ್ನು ದಕ್ಷಿಣ ಭಾರತದಲ್ಲಿ ಸಕ್ರಿಯಗೊಳಿಸುವ ಹೊಣೆ ಹೊತ್ತ ಆರೋಪ ಎದುರಿಸುತ್ತಿರುವ ಶಂಕಿತ ನಕ್ಸಲ್ ಮುಖಂಡ ರೂಪೇಶ್‍ನನ್ನು ಮಡಿ ಕೇರಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲ ಯಕ್ಕೆ ಹಾಜರುಪಡಿಸಲಾಯಿತು. ಮಡಿಕೇರಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿದ್ದ ರೂಪೇಶ್‍ನನ್ನು ಕೇರಳ ಭಯೋತ್ಪಾದಕ ನಿಗ್ರಹ ದಳ, ಕೇರಳ ಪೊಲೀಸರು ಮತ್ತು ಕೊಡಗು ಪೊಲೀಸ್ ಕಮಾಂಡೋಗಳು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತಂದರು. ಪೊಲೀಸ್ ವಾಹನದಿಂದ ಕೆಳಗಿಳಿಯುತ್ತಿದ್ದಂತೆಯೇ ನಕ್ಸಲ್ ಪರ ಘೋಷಣೆ ಕೂಗಿದ ರೂಪೇಶ್ ಸ್ವಾತಂತ್ರ್ಯ ಹೋರಾಟಗಾರ, ಕ್ರಾಂತಿಕಾರಿ ಭಗತ್‍ಸಿಂಗ್…

ಈ ಬಾರಿಯಾದರೂ ‘ಕೈ’ ಕೋಟೆ ಚಾಮರಾಜನಗರದಲ್ಲಿ ಅರಳುವುದೇ ‘ಕಮಲ’
ಚಾಮರಾಜನಗರ

ಈ ಬಾರಿಯಾದರೂ ‘ಕೈ’ ಕೋಟೆ ಚಾಮರಾಜನಗರದಲ್ಲಿ ಅರಳುವುದೇ ‘ಕಮಲ’

March 20, 2019

ಚಾಮರಾಜನಗರ: ಚಾ.ನಗರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಇದುವರೆವಿಗೆ 14 ಚುನಾ ವಣೆಗಳು ನಡೆದಿದ್ದು, ಯಾವ ಚುನಾವಣೆಗಳಲ್ಲೂ ಬಿಜೆಪಿ ಜಯ ಕಂಡಿಲ್ಲ. ಈ ಬಾರಿಯಾದರೂ ಕಮಲ ಅರಳುವುದೇ ಎಂಬ ಕುತೂಹಲ ಮೂಡಿದೆ. ಮೊದಲೆರಡು ಚುನಾವಣೆಗಳಲ್ಲಿ ಚಾಮರಾಜ ನಗರ ಲೋಕಸಭಾ ಕ್ಷೇತ್ರ ಮೈಸೂರು ಲೋಕ ಸಭಾ ದ್ವಿಸದಸ್ಯ ಕ್ಷೇತ್ರದ ವ್ಯಾಪ್ತಿಗೆ ಸೇರಿತ್ತು. 1962 ರಲ್ಲಿ ಚಾಮರಾಜನಗರ ಪ್ರತ್ಯೇಕ ಮೀಸಲು ಲೋಕಸಭಾ ಕ್ಷೇತ್ರವಾಯಿತು. ಅಲ್ಲಿಂದ(1962) 2014ರ ಚುನಾವಣೆವರೆಗೆ 14 ಚುನಾವಣೆಗಳು ನಡೆದಿದ್ದು, ಒಂದೇ ಒಂದು ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿಲ್ಲ….

ಬಿಎಸ್‍ಪಿ ಅಭ್ಯರ್ಥಿಯಾಗಿ ಡಾ.ಶಿವಕುಮಾರ್ ಆಯ್ಕೆ
ಚಾಮರಾಜನಗರ

ಬಿಎಸ್‍ಪಿ ಅಭ್ಯರ್ಥಿಯಾಗಿ ಡಾ.ಶಿವಕುಮಾರ್ ಆಯ್ಕೆ

March 20, 2019

ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರ ದಿಂದ ಬಿಎಸ್‍ಪಿ ಪಕ್ಷದ ಅಭ್ಯರ್ಥಿಯಾಗಿ ಐಎಎಸ್ ತರÀ ಬೇತುದಾರ ಡಾ.ಶಿವಕುಮಾರ್ ಅವರನ್ನು ಕಣಕ್ಕಿಳಿಸಿದೆ. ರಾಜ್ಯಾಧ್ಯಕ್ಷ ಪ್ರೊ.ಎ.ಹರಿರಾಮ್ ಅವರು ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಮಂಗಳವಾರ ಬಿಡುಗಡೆಗೊಳಿಸಿದ್ದಾರೆ. ಈ ಪಟ್ಟಿಯಲ್ಲಿ ಚಾಮ ರಾಜನಗರ ಕ್ಷೇತ್ರದಿಂದ ಡಾ.ಶಿವಕುಮಾರ್, ಚಿಕ್ಕಬ ಳ್ಳಾಪುರ ಕ್ಷೇತ್ರದಿಂದ ಡಾ.ಸಿ.ಎಸ್.ದ್ವಾರಕನಾಥ್ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದೆ. ಚಾಮರಾಜನಗರ ಕ್ಷೇತ್ರದಿಂದ ಡಾ.ಶಿವಕುಮಾರ್ ಸ್ಪರ್ಧಿಸುವುದು ಖಚಿತ ಎಂದು ಮೈಸೂರು ಮಿತ್ರ ಫೆ.19 ಸಂಚಿಕೆಯಲ್ಲಿಯೇ ಪ್ರಕಟಿಸಿತ್ತು. ಅದರಂತೆ ಶಿವಕುಮಾರ್ ಅವರ ಆಯ್ಕೆ ನಿಜವಾಗಿದೆ. ಡಾ.ಶಿವಕುಮಾರ್ ಸಂಶೋಧಕ ಹಾಗೂ…

ಚಾಮರಾಜನಗರ ಮೀಸಲು ಲೋಕಸಭಾ ಚುನಾವಣೆ-2019 ಶ್ರೀನಿವಾಸ್ ಪ್ರಸಾದ್‍ಗೆ 14, ಧ್ರುವಗೆ 6ನೇ ಚುನಾವಣೆ
ಚಾಮರಾಜನಗರ

ಚಾಮರಾಜನಗರ ಮೀಸಲು ಲೋಕಸಭಾ ಚುನಾವಣೆ-2019 ಶ್ರೀನಿವಾಸ್ ಪ್ರಸಾದ್‍ಗೆ 14, ಧ್ರುವಗೆ 6ನೇ ಚುನಾವಣೆ

March 19, 2019

ಚಾಮರಾಜನಗರ: ಚಾಮ ರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಿ.ಶ್ರೀನಿವಾಸ್ ಪ್ರಸಾದ್ ಇದುವರೆಗೆ 13 ಚುನಾವಣೆಗಳನ್ನು ಎದುರಿಸಿದ್ದಾರೆ. ಇದರಲ್ಲಿ 7 ಬಾರಿ ಗೆಲುವು ಕಂಡಿದ್ದರೆ, 6 ಬಾರಿ ಸೋಲಿನ ಕಹಿ ಉಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ್ತೊಮ್ಮೆ ಕಣಕ್ಕೆ ಇಳಿಯುತ್ತಿರುವ ಆರ್.ಧ್ರುವನಾರಾಯಣ್ 5 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ಈ ಪೈಕಿ 1 ಬಾರಿ ಸೋಲು ಕಂಡಿದ್ದು, 4 ಚುನಾವಣೆಗಳಲ್ಲಿ ಸತತವಾಗಿ ಗೆಲುವಿನ ನಗೆ ಬೀರಿದ್ದಾರೆ. ವಿ.ಶ್ರೀನಿವಾಸ್ ಪ್ರಸಾದ್ ಎದುರಿಸಿರುವ 13 ಚುನಾವಣೆಗಳಲ್ಲಿ 8 ಲೋಕಸಭೆ ಚುನಾವಣೆಯಾಗಿದ್ದು, 5…

ನೀತಿ ಸಂಹಿತೆ ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯ ಕ್ರಮ: ಡಿಸಿ
ಚಾಮರಾಜನಗರ

ನೀತಿ ಸಂಹಿತೆ ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯ ಕ್ರಮ: ಡಿಸಿ

March 19, 2019

ಚಾಮರಾಜನಗರ: ಲೋಕಸಭಾ ಕ್ಷೇತ್ರದಲ್ಲಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಅಧಿಕಾರಿಗಳು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ ಕಾವೇರಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಚಾ.ನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಶೀಲ್ದಾರರು, ಪೊಲೀಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅವಧಿ ಆರಂಭಗೊಂಡಿದ್ದು, ನಿಯೋಜಿಸಿರುವ ಕೆಲಸವನ್ನು ಎಲ್ಲೆಡೆ ಅತ್ಯಂತ ಕಟ್ಟುನಿಟ್ಟಾಗಿ ಕೈಗೊಳ್ಳಬೇಕು. ಚೆಕ್‍ಪೋಸ್ಟ್ ಗಳಲ್ಲಿ ತಪಾಸಣೆ…

1 8 9 10 11 12 74
Translate »